ಕೆಂಪು ಕೋಟೆ 
ದೇಶ

ದೆಹಲಿಯಲ್ಲಿ ಹೈ ಅಲರ್ಟ್: ರೆಡ್ ಫೋರ್ಟ್ ಗೆ 90 ಎನ್ ಎಸ್ಜಿ ಕಮಾಂಡೋ ನಿಯೋಜನೆ

ಉಗ್ರರ ದಾಳಿ ಬೆದರಿಕೆ ಹಿನ್ನೆಲೆಯಲ್ಲಿ ದೆಹಲಿಯ ಐತಿಹಾಸಿಕ ಕೆಂಪುಕೋಟೆ ಸ್ಮಾರಕಕ್ಕೆ ಭದ್ರತೆ ಹೆಚ್ಚಿಸಲಾಗಿದೆ...

ನವದೆಹಲಿ: ಉಗ್ರರ ದಾಳಿಯ ಬೆದರಿಕೆ ಹಿನ್ನೆಲೆಯಲ್ಲಿ ದೆಹಲಿಯ ಐತಿಹಾಸಿಕ ಕೆಂಪುಕೋಟೆ ಸ್ಮಾರಕಕ್ಕೆ ಭದ್ರತೆ ಹೆಚ್ಚಿಸಲಾಗಿದೆ.

ರಾಷ್ಟ್ರೀಯ ಭದ್ರತಾ ದಳದ 90 ಕಮಾಂಡೋಗಳನ್ನು ರೆಡ್ ಫೋರ್ಟ್ ಗೆ ಮಂಗಳವಾರ ರಾತ್ರಿ ನಿಯೋಜಿಸಲಾಗಿದೆ. ಜೊತೆಗೆ ರಾಷ್ಟ್ರ ರಾಜಧಾನಿಯ ಹಲವು ಪ್ರಮುಖ ಸ್ಥಳಗಳಿಗೂ ಬಿಗಿ ಭದ್ರತೆ ಒದಗಿಸಲಾಗಿದೆ.

ದೇಶದ ಇತಿಹಾಸದಲ್ಲಿ ಕೆಂಪುಕೋಟೆ  ಅತಿ ಮುಖ್ಯವಾದ ಸ್ಥಳವಾಗಿದೆ, ಭಾರತ ಸ್ವತಂತ್ರ್ಯ ಪಡೆದಾಗಿನಿಂದ ಇಂದಿನವರೆಗೂ ದೇಶದ ಎಲ್ಲಾ ಪ್ರಧಾನ ಮಂತ್ರಿಗಳು ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯಲ್ಲಿಯೇ ಧ್ವಜಾರೋಹಣ ಮಾಡುತ್ತಾರೆ.ಮೊಗಲರ ಕಾಲದಲ್ಲಿ ಕಟ್ಟಿದ ಕೆಂಪುಕೋಟೆಗೆ ಸುಮಾರು 200 ವರ್ಷಗಳ ಇತಿಹಾಸವಿದೆ.

ಪ್ರಧಾನಿ ನರೇಂದ್ರ ಮೋದಿ ಬಲೋಚಿಸ್ತಾನದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿರುವುದನ್ನು ವಿರೋಧಿಸಿದ ನಂತರ ಪಾಕಿಸ್ತಾನದಿಂದ ಉಗ್ರ ಚಟುವಟಿಕೆಗಳು ಹೆಚ್ಚಿವೆ. ಅದರ್ರೂ ಜಮ್ಮು ಕಾಶ್ಮೀರದಲ್ಲಿ ಪಾಕ್ ತನ್ನ ಭಯೋತ್ಪಾದಕ ಕೆಲಸವನ್ನು ಹೆಚ್ಚು ಮಾಡುತ್ತಿದೆ. ಹೀಗಾಗಿ ದೇಶದ ಪ್ರಮುಖ ಸ್ಥಳಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT