ತಮಿಳುನಾಡು ಸಿಎಂ ಜಯಲಲಿತಾ 
ದೇಶ

ಜಯಲಲಿತಾ ಅರೋಗ್ಯ ವಿಚಾರಿಸಿದ ಅಮಿತ್ ಶಾ, ಅರುಣ್ ಜೇಟ್ಲಿ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ತಮಿಳುನಾಡಿಗೆ ಭೇಟಿ ನೀಡಿ ತೀವ್ರ ಅನಾರೋಗ್ಯಕ್ಕೀಡಾಗಿಗಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಅರೋಗ್ಯ ವಿಚಾರಿಸಿದ್ದಾರೆ.

ಚೆನ್ನೈ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ತಮಿಳುನಾಡಿಗೆ ಭೇಟಿ ನೀಡಿ ತೀವ್ರ ಅನಾರೋಗ್ಯಕ್ಕೀಡಾಗಿಗಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಅರೋಗ್ಯ ವಿಚಾರಿಸಿದ್ದಾರೆ.

ಜಯಲಲಿತಾ ಅವರು ದಾಖಲಾಗಿರುವ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದ ಅಮಿತ್ ಶಾ ಹಾಗೂ ಅರುಣ್ ಜೇಟ್ಲಿ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ. ತೀವ್ರ ಜ್ವರ ಹಾಗೂ ದೇಹದ ನಿರ್ಜಲೀಕರಣ ಸಮಸ್ಯೆ ಎದುರಿಸುತ್ತಿದ್ದ ಜಯಲಲಿತಾ ಅವರಿಗೆ ಸೆ.22 ರಿಂದ ಚಿಕಿತ್ಸೆ ನೀಡಲಾಗುತ್ತಿದೆ.

ಸುಮಾರು 20 ನಿಮಿಷಗಳ ಕಾಲ ಆಸ್ಪತ್ರೆಯಲ್ಲೇ ಇದ್ದ ಅಮಿತ್ ಶಾ ಹಾಗೂ ಅರುಣ್ ಜೇಟ್ಲಿ, ಜಯಲಲಿತಾ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿಲ್ಲವಾದ್ದರಿಂದ ಅಮಿತ್ ಶಾ ಹಾಗೂ ಜೇಟ್ಲಿ ಜಯಲಲಿತಾ ಅವರನ್ನು ಭೇಟಿ ಮಾಡಿದ್ದರೋ ಅಥವಾ ವೈದ್ಯರನ್ನು ಮಾತ್ರ ಭೇಟಿ ಮಾಡಿದ್ದರೋ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಈ ವರೆಗೂ ಬಹಿರಂಗವಾಗಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video