ಚಲಿಸುತ್ತಿದ್ದ ಬಸ್ ನಲ್ಲಿ ಶೂಟೌಟ್, ಓರ್ವನ ಸಾವು, ದಾಳಿಕೋರರು ಪರಾರಿ
ಚಲಿಸುತ್ತಿದ್ದ ಬಸ್ ನಲ್ಲಿ ವ್ಯಕ್ತಿಯ ಮೇಲೆ ದುಷ್ಕರ್ಮಿಗಳಿಬ್ಬರು ಗುಂಡು ಹಾರಿಸಿ ಕೊಂದು ಹಾಕಿರುವ ಘಟನೆ ತಮಿಳುನಾಡಿನ ಮದುರೈ ಸಮೀಪ ಬುಧವಾರ ನಡೆದಿದೆ.
ಮಧುರೈ: ಚಲಿಸುತ್ತಿದ್ದ ಬಸ್ ನಲ್ಲಿ ವ್ಯಕ್ತಿಯ ಮೇಲೆ ದುಷ್ಕರ್ಮಿಗಳಿಬ್ಬರು ಗುಂಡು ಹಾರಿಸಿ ಕೊಂದು ಹಾಕಿರುವ ಘಟನೆ ತಮಿಳುನಾಡಿನ ಮದುರೈ ಸಮೀಪ ಬುಧವಾರ ನಡೆದಿದೆ.
ಮೂಲಗಳ ಪ್ರಕಾರ ಮಧುರೈನಿಂದ ಸುಮಾರು 80 ಕಿ.ಮೀ ದೂರದಲ್ಲಿರುವ ಸತ್ತೂರು ಪಟ್ಟಣದ ಬಳಿ ಈ ದಾಳಿ ನಡೆದಿದ್ದು, ತಮಿಳುನಾಡು ಸಾರಿಗೆ ಇಲಾಖೆಗೆ ಸೇರಿದ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಮೇಲೆ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡೇಟಿನಿಂದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗುಂಡು ಹಾರಿಸಿದ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
ಮೃತ ವ್ಯಕ್ತಿಯನ್ನು ತಮಿಳುನಾಡಿನ ಕೋವಿಲ್ ಪಟ್ಟಿಯ ಕರುಪ್ಪಸಾಮಿ ಎಂದು ಗುರುತಿಸಲಾಗಿದೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಮಧುರೈ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.