ಕಾಶ್ಮೀರದಲ್ಲಿ ಉಗ್ರರ ದಾಳಿ: ನಾಲ್ವರು ಯೋಧರಿಗೆ ಗಾಯ
ಜಮ್ಮು-ಕಾಶ್ಮೀರದ ಶ್ರೀನಗರ ಹೊರವಲಯದ ಝಕುರಾದಲ್ಲಿ ಉಗ್ರಗಾಮಿಗಳು ಏಕಾಏಕಿ ಗುಂಡಿನ ದಾಳಿ...
ಶ್ರೀನಗರ: ಜಮ್ಮು-ಕಾಶ್ಮೀರದ ಶ್ರೀನಗರ ಹೊರವಲಯದ ಝಕುರಾದಲ್ಲಿ ಉಗ್ರಗಾಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದು ಸಶಸ್ತ್ರ ಸೀಮಾ ಬಲದ ನಾಲ್ವರು ಜವಾನರು ಗಾಯಗೊಂಡಿದ್ದಾರೆ.
ಬಂದೂಕುಧಾರಿ ತಪ್ಪಿಸಿಕೊಂಡಿದ್ದು, ಇದೀಗ ಆ ಪ್ರದೇಶವನ್ನು ಸುತ್ತುವರಿಯಲಾಗಿದೆ. ಅರೆ ಸೇನಾಪಡೆಯ ಯೋಧರು ಅಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸೆಪ್ಟೆಂಬರ್ 29ರಂದು ಭಾರತವು ಪಾಕ್ ಆಕ್ರಮಿತ ಗಡಿ ನಿಯಂತ್ರಣ ರೇಖೆ ಬಳಿ ಸರ್ಜಿಕಲ್ ಸ್ಟ್ರೈಕ್ ನಡೆಸಿದ ನಂತರ ಪಾಕಿಸ್ತಾನಿ ಭಯೋತ್ಪಾದಕರಿಂದ ಹಲವು ಬಾರಿ ದಾಳಿ ಎದುರಿಸಿದ್ದಾರೆ. ಈ ವಾರದ ಆರಂಭದಲ್ಲಿ ಲಷ್ಕರ್-ಎ-ತೊಯ್ಬಾದ ಉಗ್ರಗಾಮಿಗಳು ಪಾಂಪೊರ್ ನಲ್ಲಿ ಸರ್ಕಾರಿ ಕಟ್ಟಡದ ಮೇಲೆ ದಾಳಿ ನಡೆಸಿ ಅದರ ಇಬ್ಬರು ಸದಸ್ಯರು ಮೃತರಾಗಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.