ಬ್ಯಾನರ್ 
ದೇಶ

ಸೂರತ್: ಪಾಕ್ ಉಗ್ರರ ಭಾವಚಿತ್ರವುಳ್ಳ ಬ್ಯಾನರ್‌ನಲ್ಲಿ ಕೇಜ್ರಿವಾಲ್‌ಗೂ ಸ್ಥಾನ

ಕ್ಟೋಬರ್ 16ರಂದು ಆಮ್ ಆದ್ಮಿ ಪಾರ್ಟಿ(ಆಪ್) ಸೂರತ್ ನಲ್ಲಿ ಬೃಹತ್ ರ್ಯಾಲಿ ನಡೆಸಲಿದ್ದು ಈ ರ್ಯಾಲಿಯಲ್ಲಿ ಭಾಗವಹಿಸಲು ದೆಹಲಿ ಮುಖ್ಯಮಂತ್ರಿ ಅರವಿಂದ್...

ನವದೆಹಲಿ: ಅಕ್ಟೋಬರ್ 16ರಂದು ಆಮ್ ಆದ್ಮಿ ಪಾರ್ಟಿ(ಆಪ್) ಸೂರತ್ ನಲ್ಲಿ ಬೃಹತ್ ರ್ಯಾಲಿ ನಡೆಸಲಿದ್ದು ಈ ರ್ಯಾಲಿಯಲ್ಲಿ ಭಾಗವಹಿಸಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಗಮಿಸುತ್ತಿದ್ದಾರೆ. ಇದಕ್ಕೂ ಮುನ್ನ ನಗರದ ಪ್ರಮುಖ ರಸ್ತೆಯೊಂದರಲ್ಲಿ ಪಾಕಿಸ್ತಾನ ಹಿರೋಗಳಾದ ಉಗ್ರ ಬುರ್ಹಾನ್ ವಾನಿ, ಹಫೀಜ್ ಸೈಯಿದ್, ಒಸಾಮಾ ಬಿನ್ ಲಾಡನ್ ಜತೆಗೆ ಅರವಿಂದ್ ಕೇಜ್ರಿವಾಲ್ ಭಾವಚಿತ್ರವುಳ್ಳ ಬ್ಯಾನರ್ ಸಹ ರಾರಾಜಿಸುತ್ತಿದೆ. 
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮೇಲಿನ ಭಾರತೀಯ ಸೇನೆ ಸೀಮಿತಯ ದಾಳಿಯನ್ನು ಪ್ರಶ್ನಿಸಿ ಪಾಕಿಸ್ತಾನ ಮಾಧ್ಯಮಗಳಲ್ಲಿ ಹಿರೋ ಆದ ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್ ಅವರ ಭಾವಚಿತ್ರ ಉಗ್ರರಿರುವ ಬ್ಯಾನರ್ ನಲ್ಲಿದ್ದು ಇದೀಗ ವಿವಾದಕ್ಕೆ ಕಾರಣವಾಗಿದೆ. 
ಈ ಬ್ಯಾನರ್ ಬಿಜೆಪಿ ಹಾಕಿದೆ ಎಂದು ಆಪ್ ಆರೋಪಿಸಿದ್ದು ಇದಕ್ಕೆ ಬಿಜೆಪಿ ಇದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದೆ. 
ಪ್ರಮುಖ ರಸ್ತೆಗಳಲ್ಲಿ ಹಾಕಲಾಗಿದ್ದ ಹಲವು ಬ್ಯಾನರ್ ಗಳನ್ನು ಕಿತ್ತು ಹಾಕಿರುವ ಆಪ್ ಕಾರ್ಯಕರ್ತರು ಇನ್ನುಳಿದ ಬ್ಯಾನರ್ ಗಳನ್ನು ತೆಗೆದು ಹಾಕಲಾಗುವುದು ಎಂದು ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಆಪ್ ಮುಖಂಡ ಯೋಗೇಶ್ ಜಾಡ್ವಾನಿ ಇಂತ ನೀಚ ಕೃತ್ಯವನ್ನು ಬಿಜೆಪಿಯೇ ಮಾಡಿದೆ ಎಂದು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ