ಬ್ರಿಕ್ಸ್ ಶೃಂಗ ಸಭೆ (ಸಂಗ್ರಹ ಚಿತ್ರ) 
ದೇಶ

ಗೋವಾದಲ್ಲಿ ಬ್ರಿಕ್ಸ್ ಶೃಂಗಸಭೆ; ಪ್ರಬಲ ರಾಜತಾಂತ್ರಿಕ ಬೆಂಬಲದತ್ತ ಮೋದಿ ಚಿತ್ತ!

ವಿಶ್ವದ ಅಭಿವೃದ್ಧಿಶೀಲ ಐದು ರಾಷ್ಟ್ರಗಳ ಸಂಘಟನೆ ಬ್ರಿಕ್ಸ್​ನ ಶೃಂಗಸಭೆಗೆ ಗೋವಾದಲ್ಲಿ ಶನಿವಾರ ಚಾಲನೆ ದೊರೆಯಲಿದ್ದು, ಭಯೋತ್ಪಾದನೆ ಹಾಗೂ ಆರ್ಥಿಕ ವಿಚಾರ ಕುರಿತು ಚರ್ಚೆಯಾಗುವ ನಿರೀಕ್ಷೆಯಿದೆ.

ಪಣಜಿ: ವಿಶ್ವದ ಅಭಿವೃದ್ಧಿಶೀಲ ಐದು ರಾಷ್ಟ್ರಗಳ ಸಂಘಟನೆ ಬ್ರಿಕ್ಸ್​ನ ಶೃಂಗಸಭೆಗೆ ಗೋವಾದಲ್ಲಿ ಶನಿವಾರ ಚಾಲನೆ ದೊರೆಯಲಿದ್ದು, ಭಯೋತ್ಪಾದನೆ ಹಾಗೂ ಆರ್ಥಿಕ ವಿಚಾರ ಕುರಿತು  ಚರ್ಚೆಯಾಗುವ ನಿರೀಕ್ಷೆಯಿದೆ.

ಭಾರತದ ಮಟ್ಟಿಗೆ ಗೋವಾ ಬ್ರಿಕ್ಸ್ ಶೃಂಗಸಭೆ ಪ್ರಮುಖವಾಗಿದ್ದು, ಗಡಿಯಾಚೆಗಿನ ಭಯೋತ್ಪಾದನೆ ಹಾಗೂ ವಾಣಿಜ್ಯಾಭಿವೃದ್ಧಿ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತ  ಇತರೆ ಸದಸ್ಯ ರಾಷ್ಟ್ಟಗಳಿಂದ ಪ್ರಬಲ ರಾಜತಾಂತ್ರಿಕ ಬೆಂಬಲ ಪಡೆಯುವತ್ತ ಗಮನ ಕೇಂದ್ರೀಕರಿಸಿದೆ. ಇನ್ನು ನಾಳೆಯಿಂದ ಆರಂಭಗೊಳ್ಳಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಸದಸ್ಯ  ರಾಷ್ಟ್ರಗಳಾದ ಬ್ರೆಜಿಲ್, ರಷ್ಯಾ, ಭಾರತ, ಚೀನಾ ಹಾಗೂ ದಕ್ಷಿಣ ಆಫ್ರಿಕಾದೇಶಗಳ ಪ್ರತಿನಿಧಿಗಳು ಪಾಲ್ಗೊಳ್ಳುತ್ತಿದ್ದು, ಸದಸ್ಯ ರಾಷ್ಟ್ರಗಳ ನಡುವೆ ಹಲವಾರು ಒಪ್ಪಂದಗಳು ಅಂತಿಮಗೊಳ್ಳಲಿವೆ.

ಈಗಾಗಲೇ ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಹಲವು ಮಹತ್ವದ ರಕ್ಷಣಾ ಒಪ್ಪಂದಗಳಿಗೆ ಸಹಿ ಹಾಕಲು ನಿರ್ಧರಿಸಿದ್ದು, ಚೀನಾ ಅಧ್ಯಕ್ಷ ಕ್ಸಿ  ಜಿನ್ ಪಿಂಗ್ ಅವರೊಂದಿಗೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಇದೇ ವೇಳೆ ಭಾರತ ಎನ್​ಎಸ್​ಜಿ ಸೇರ್ಪಡೆಯಾಗಲು ಚೀನಾ ವಿರೋಧ ವ್ಯಕ್ತಪಡಿಸಿರುವುದು, ಉಗ್ರ  ಮಸೂದ್ ಅಜರ್​ನನ್ನು ವಿಶ್ವಸಂಸ್ಥೆಯ ಭಯೋತ್ಪಾದಕರ ಪಟ್ಟಿಗೆ ಸೇರಿಸಲು ಸತತ ಎರಡನೇ ಬಾರಿ ವಿರೋಧಿಸಿರುವ ವಿಚಾರ ಮಾತುಕತೆ ವೇಳೆ ಪ್ರಸ್ತಾಪವಾಗುವ ಸಾಧ್ಯತೆ ಇದೆ.

ಶೃಂಗಸಭೆ ವೇಳೆ ಪ್ರಧಾನಿ ಮೋದಿ ವಿವಿಧ ದೇಶಗಳ 10ಕ್ಕೂ ಹೆಚ್ಚು ನಾಯಕರೊಂದಿಗೆ ಮಾತುಕತೆ ನಡೆಲಿದ್ದು, ಬ್ರಿಕ್ಸ್ ರಾಷ್ಟ್ರಗಳ ಹೊರತಾಗಿ ಭೂತಾನ್, ಬಾಂಗ್ಲಾದೇಶ, ನೇಪಾಳ, ಶ್ರೀಲಂಕಾ,  ಥಾಯ್ಲೆಂಡ್​ನ ಆಡಳಿತ ಮುಖ್ಯಸ್ಥರೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಲಿದ್ದಾರೆ.

ಅಕ್ಟೋಬರ್ 16ರಂದು ಮ್ಯಾನ್ಮಾರ್ ಕೌನ್ಸೆಲರ್ ಆಂಗ್ ಸಾನ್ ಸೂಕಿ ಭಾರತಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಆಂಗ್ ಸಾನ್ ಸೂಕಿ ಅವರು ಅಧಿಕಾರ  ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!