ನವದೆಹಲಿ: ಉರಿ ಸೆಕ್ಟರ್'ನ ಸೇನಾ ಪ್ರಧಾನ ಕಚೇರಿ ಮೇಲೆ ಉಗ್ರರು ನಡೆಸಿದ ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಲು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯ ಫರೂಕ್ ಅಬ್ದುಲ್ಲಾ ಅವರು ಶುಕ್ರವಾರ ನಿರಾಕರಿಸಿದ್ದಾರೆ.
ಕಾಶ್ಮೀರದಲ್ಲಿ ಉಂಟಾಗಿರುವ ಹಿಂಸಾಚಾರ ಕುರಿತಂತೆ ಅಬ್ದುಲ್ಲಾ ಅವರು ಇಂದು ಸರ್ವಪಕ್ಷ ಸಭೆ ನಡೆಸಿದ್ದಾರೆ. ಇದರಂತೆ ಸಭೆ ನಂತರ ಮಾತನಾಡಿರುವ ಅವರು, ಉರಿ ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಹದಗೆಟ್ಟಿತ್ತು. ಸಮಸ್ಯೆಗಳ ಕುರಿತಂತೆ ಉಭಯ ದೇಶಗಳು ಕುಳಿತು ಮಾತುಕತೆ ನಡೆಸಬೇಕಾದ ಅಗತ್ಯವಿದೆ. ಎರಡು ದೇಶಗಳ ನಡುವಿನ ಸಮಸ್ಯೆಗಳು ಬಗೆಹರಿಯುವವರೆಗೂ ಭಯೋತ್ಪಾದನೆಗೆ ಅಂತ್ಯ ಹಾಡಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ಹೇಳಿಕೆಯನ್ನು ಉದ್ಘರಿಸಿರುವ ಅವರು, ನಮ್ಮ ನೆರೆಯವರು ನಾವು ಆಯ್ಕೆ ಮಾಡಲು ಸಾಧ್ಯವಿಲ್ಲ. ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸುವುದು ಬಿಟ್ಟು ನಮಗೆ ಬೇರಾವುದೇ ದಾರಿಯಿಲ್ಲ. ಕಾಶ್ಮೀರದಲ್ಲಿ ಶಾಂತಿ ನೆಲೆಸುವ ಬಗ್ಗೆಯಷ್ಟೇ ನಾವು ಚಿಂತಿಸುತ್ತೇವೆ, ಸೀಮಿತ ದಾಳಿ ನಮಗೆ ಚಿಂತೆಯಿಲ್ಲ ಎಂದು ತಿಳಿಸಿದ್ದಾರೆ.