ಸಂಗ್ರಹ ಚಿತ್ರ 
ದೇಶ

ಸಮಾನ ನಾಗರೀಕ ಸಂಹಿತೆಯನ್ನು ಎಂದಿಗೂ ಒಪ್ಪಿಕೊಳ್ಳುವುದಿಲ್ಲ: ಅಬು ಅಜ್ಮಿ

ಸಮಾನ ನಾಗರೀಕ ಸಂಹಿತೆ ಕುರಿತಂತೆ ಸುಪ್ರೀಂಕೋರ್ಟ್ ತೆಗೆದುಕೊಂಡಿರುವ ನಿರ್ಧಾರಕ್ಕೆ ಮಹಾರಾಷ್ಟ್ರ ರಾಜ್ಯ ಸಮಾಜವಾದಿ ಪಕ್ಷದ ಅಧ್ಯಕ್ಷ ಅಬು ಅಜ್ಮಿ ಅವರು ವಿರೋಧ ವ್ಯಕ್ತಪಡಿಸಿದ್ದು, ಸಮಾನ ನಾಗರೀಕ...

ಮುಂಬೈ: ಸಮಾನ ನಾಗರೀಕ ಸಂಹಿತೆ ಕುರಿತಂತೆ ಸುಪ್ರೀಂಕೋರ್ಟ್ ತೆಗೆದುಕೊಂಡಿರುವ ನಿರ್ಧಾರಕ್ಕೆ ಮಹಾರಾಷ್ಟ್ರ ರಾಜ್ಯ ಸಮಾಜವಾದಿ ಪಕ್ಷದ ಅಧ್ಯಕ್ಷ ಅಬು ಅಜ್ಮಿ ಅವರು ವಿರೋಧ ವ್ಯಕ್ತಪಡಿಸಿದ್ದು, ಸಮಾನ ನಾಗರೀಕ ಸಂಹಿತೆಯನ್ನು ನಾವು ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಎಂದು ಗುರುವಾರ ಹೇಳಿದ್ದಾರೆ.

ತ್ರಿವಳಿ ತಲಾಕ್,  ನಿಕಾಹ್ ಹಲಾಲ್,  ಬಹುಪತ್ನಿತ್ವ ಇಸ್ಲಾಮ್ ನ ಆಚರಣೆಯ ಅವಿಭಾಜ್ಯ ಅಂಗಗಳಲ್ಲ ಅಥವಾ ಅದನ್ನು ಪಾಲಿಸಲೇಬೇಕಾದ ಅನಿವಾರ್ಯ ಕಾನೂನುಗಳಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಹೇಳಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಭಾರತ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಪ್ರತೀಯೊಬ್ಬರಿಗೂ ಧರ್ಮದ ಸ್ವಾತಂತ್ರ್ಯದ ಹಕ್ಕಿದೆ. ಹೀಗಾಗಿ ನಾವು ಎಂದಿಗೂ ಸಮಾನ ನಾಗರೀಕ ಸಂಹಿತೆಯನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ನಮ್ಮ ಧರ್ಮದ ನೀತಿ ಹಾಗೂ ನಿಯಮಗಳನ್ನು ಬದಲಿಸಿ ಸರ್ಕಾರ ತನ್ನದೇ ರೀತಿಯಲ್ಲಿ ಕಾನೂನನ್ನು ಅಳವಡಿಸಿದರೆ ಅದನ್ನು ನಾವು ಒಪ್ಪಿಕೊಳ್ಳುವುದಿಲ್ಲ. ಧರ್ಮದ ನೀತಿಗಳನ್ನು ಸರ್ಕಾರ ಬದಲಿಸಿದ್ದೇ ಆದರೆ, ದೇಶದಲ್ಲಿರುವ ಯಾವುದೇ ಪ್ರಜೆ ಕೂಡ ಇದನ್ನು ಒಪ್ಪಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video