ದೇಶ

ಭಾರತೀಯ ಸೇನೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದ ಇಬ್ಬರು ಶಂಕಿತರ ಬಂಧನ

Manjula VN

ಜೈಪುರ: ಭಾರತೀಯ ಸೇನೆ ಹಾಗೂ ಗಡಿ ಭದ್ರತಾ ಪಡೆಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದ ಇಬ್ಬರು ಶಂಕಿತರನ್ನು ರಾಜಸ್ತಾನದ ಬಿಕನೇರ್ ಪ್ರದೇಶದಲ್ಲಿ ಶುಕ್ರವಾರ ಬಂಧನಕ್ಕೊಳಪಡಿಸಲಾಗಿದೆ.

ಎರಡು ದಿನಗಳ ಹಿಂದಷ್ಟೇ ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ (ಐಎಸ್ಐ) ಬೆಂಬಲಿತ ಇಬ್ಬರು ಏಜೆಂಟ್ ಗಳನ್ನು ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಅಧಿಕಾರಿಗಳು ಕಚ್ ಜಿಲ್ಲೆಯ ಖಾವ್ಡಾದಲ್ಲಿ ಬಂಧನಕ್ಕೊಳಪಡಿಸಿತ್ತು. ಬಂಧಿತರು ಗಡಿಯಲ್ಲಿರುವ ಸೇನೆ ಹಾಗೂ ಭದ್ರತಾ ಪಡೆಗಳ ಕುರಿತಂತೆ ಸೂಕ್ಷ್ಮ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ನೀಡುತ್ತಿದ್ದರು. ಇದರಂತೆ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಬಂಧಿಸಲಾಗಿತ್ತು.

ಗಡಿಯಲ್ಲಿ ಇದೀಗ ಮತ್ತೆ ಇಬ್ಬರನ್ನು ಬಿಎಸ್ಎಫ್ ಯೋಧರು ಬಂಧನಕ್ಕೊಳಪಡಿಸಿದ್ದು, ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆಂದು ಹೇಳಲಾಗುತ್ತದೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿಗೆ ಪ್ರತೀಕಾರವಾಗಿ ಉಗ್ರ ಸಂಘಟನೆಗಳು ಭಾರತದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸುತ್ತಿವೆ ಎಂಬ ಗುಪ್ತಚರ ಇಲಾಖೆ ಎಚ್ಚರಿಕೆ ನೀಡುತ್ತಿರುವ ಬೆನ್ನಲ್ಲೇ ಇದೀಗ ಈ ಬೆಳವಣಿಗೆಗಳು ಕಂಡು ಬರುತ್ತಿವೆ.

SCROLL FOR NEXT