ಸೂರತ್: ವಸೂಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಶಾಸಕ ಗುಲಾಬ್ ಸಿಂಗ್ ಅವರನ್ನು ದೆಹಲಿ ಪೊಲೀಸರು ಭಾನುವಾರ ಗುಜರಾತ್ ನಲ್ಲಿ ಬಂಧಿಸಿದ್ದಾರೆ.
ಗುಜರಾತ್ ಆಮ್ ಆದ್ಮಿ ಪಕ್ಷದ ಉಸ್ತುವಾರಿಯೂ ಆಗಿರುವ ಗುಲಾಬ್ ಸಿಂಗ್ ಅವರು ದೆಹಲಿ ಪೊಲೀಸರು ಬಂಧಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಇಂದು ಸ್ವತಃ ಉಮ್ರಾ ಪೊಲೀಸ್ ಠಾಣೆಯಲ್ಲಿ ಪೊಲೀಸರಿಗೆ ಶರಣಾಗಿದ್ದಾರೆ.
ಸೂರತ್ ನಲ್ಲಿ ಇಂದು ದೆಹಲಿ ಮುಖ್ಯಮಂತ್ರಿ ಹಾಗೂ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ರ್ಯಾಲಿ ನಿಗದಿಯಾಗಿದ್ದು, ರ್ಯಾಲಿಗೂ ಕೆಲವು ಗಂಟೆಗಳ ಮುನ್ನ ಆಪ್ ಶಾಸಕನನ್ನು ವಶಕ್ಕೆ ಪಡೆಯಲಾಗಿದೆ.
ತಮ್ಮ ಸಹಚರರು ಭಾಗಿಯಾಗಿರುವ ವಸೂಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ಗುಲಾಬ್ ಸಿಂಗ್ ವಿರುದ್ಧ ಇತ್ತೀಚಿಗಷ್ಟೇ ಜಾಮೀನು ರಹಿತ ವಾರಂಟ್ ಜಾರಿ ಮಾಡಲಾಗಿತ್ತು. ಇದೇ ಪ್ರಕರಣ ಸಂಬಂಧ ಕಳೆದ ತಿಂಗಳು ಸಿಂಗ್ ಚಾಲಕ ಹಾಗೂ ಆತನ ಸಹಚರರನ್ನು ದೆಹಲಿ ಪೊಲೀಸರು ಬಂಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics