ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ 
ದೇಶ

ಶೀಘ್ರದಲ್ಲೇ ವಾರಣಾಸಿಗೆ ಉದ್ಧವ್ ಠಾಕ್ರೆ ಭೇಟಿ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಲೋಕಸಭಾ ಕ್ಷೇತ್ರ ವಾರಣಾಸಿಗೆ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆಯವರು ಶೀಘ್ರದಲ್ಲೇ ಭೇಟಿ ನೀಡಲಿದ್ದಾರೆಂದು ಹೇಳಲಾಗುತ್ತಿದೆ...

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಲೋಕಸಭಾ ಕ್ಷೇತ್ರ ವಾರಣಾಸಿಗೆ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆಯವರು ಶೀಘ್ರದಲ್ಲೇ ಭೇಟಿ ನೀಡಲಿದ್ದಾರೆಂದು ಹೇಳಲಾಗುತ್ತಿದೆ.

ಉದ್ಧವ್ ಠಾಕ್ರೆಯವರ ಅವರು ವಾರಣಾಸಿಗೆ ಭೇಟಿ ನೀಡುವ ಸುಳಿವನ್ನು ಸ್ವತಃ ಶಿವಸೇನೆ ನಾಯಕ ಸಂಜಯ್ ರಾವತ್ ಅವರೇ ನೀಡಿದ್ದು, ಭೇಟಿ ನೀಡುವ ದಿನಾಂಕವನ್ನು ಮಾತ್ರ ಬಹಿರಂಗ ಪಡಿಸಿಲ್ಲ ಎಂದು ತಿಳಿದುಬಂದಿದೆ.

ಬಿಜೆಪಿ ನಾಯಕರಿಗೆ ಬಿಸಿ ಮುಟ್ಟಿಸುವ ಸಲುವಾಗಿ ಶಿವಸೇನೆ ಉತ್ತರಪ್ರದೇಶದ ಚುನಾವಣೆಯತ್ತ ಗಮನ ಹರಿಸಿದೆಯೇ ಎಂಬ ಹಲವು ಮಾತುಗಳು ಕೇಳಿಬರುತ್ತಿವೆ. ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ರಾವತ್ ಅವರು, ಬಿಜೆಪಿ, ಬಿಎಸ್ ಪಿ, ಎಸ್ ಪಿ ಹಾಗೂ ಕಾಂಗ್ರೆಸ್ ಸೇರಿದಂತೆ ಎಲ್ಲಾ ಪಕ್ಷಗಳು ಚುನಾವಣೆಯತ್ತ ಗಮನ ಹರಿಸುತ್ತಿದೆ. ಕೇಂದ್ರದಲ್ಲಿಯೇ ಆಗಲಿ, ಮಹಾರಾಷ್ಟ್ರದಲ್ಲಿಯೇ ಆಗಲಿ ಬಿಜೆಪಿ ಹಾಗೂ ಶಿವಸೇನೆ ಎರಡೂ ಸಮಾನ ರೀತಿಯಲ್ಲಿ ಅಧಿಕಾರವನ್ನು ಹಂಚಿಕೊಳ್ಳಲಿದೆ ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರದ ಮುನ್ಸಿಪಲ್ ಕಾರ್ಪೋರೇಶನ್ ಚುನಾವಣೆ ಸಂಬಂಧ ಬಿಜೆಪಿ- ಶಿವಸೇನೆ ನಡುವೆ ಮನಸ್ತಾಪಗಳು ಉಂಟಾಗಿದ್ದವು. ಶಿವಸೇನೆಯನ್ನು ಬೆಂಬಲವಿಲ್ಲದೆಯೇ ಒಬ್ಬಂಟಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಈ ಹಿಂದೆ ಬಿಜೆಪಿ ಹೇಳಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ

'ನನ್ನ ಚೋಲಿ ಬಗ್ಗೆ 6 ಜನರಿಂದ ಪ್ಯಾನಲ್ ಡಿಸ್ಕಷನ್, ಸಂಸ್ಕೃತಿ ಬಟ್ಟೆಯಲ್ಲ, ಹೃದಯದಲ್ಲಿದೆ'; ರಾಖಿ ಜಾಹೀರಾತು ವಿವಾದ ಬಗ್ಗೆ ಮೌನ ಮುರಿದ ನಟಿ Kriti Sanon

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ