ಉ.ಪ್ರದೇಶ ಕಾಂಗ್ರೆಸ್ ನಾಯಕಿ ರಿಟಾ ಬಹುಗುಣ ಬಿಜೆಪಿ ಸೇರ್ಪಡೆ?
ಮುಂದಿನ ವರ್ಷ ನಡೆಯುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗಾಗಿ ರಾಜಕೀಯ ರಂಗೇರುತ್ತಿದ್ದು, ಕಾಂಗ್ರೆಸ್ ಹಿರಿಯ ನಾಯಕಿ...
ಲಖನೌ: ಮುಂದಿನ ವರ್ಷ ನಡೆಯುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗಾಗಿ ರಾಜಕೀಯ ರಂಗೇರುತ್ತಿದ್ದು, ಕಾಂಗ್ರೆಸ್ ಹಿರಿಯ ನಾಯಕಿ ರಿಟಾ ಬಹುಗುಣ ಜೋಶಿ ಅವರು ಭಾರತೀಯ ಜನತಾ ಪಕ್ಷ(ಬಿಜೆಪಿ) ಸೇರಲು ಸಿದ್ಧತೆ ನಡೆಸಿದ್ದಾರೆ ಎಂದು ವರದಿ ಮಾಡಲಾಗಿದೆ.
ಪ್ರಸ್ತೂತ ಲಖನೌ ಕೇಂದ್ರದ ಕಾಂಗ್ರೆಸ್ ಶಾಸಕಿಯಾಗಿರುವ ರಿಟಾ ಅವರು ಈಗಾಗಲೇ ಬಿಜೆಪಿ ಅಧ್ಯಕ್ಷ ಅಮಿತಾ ಶಾ ಹಾಗೂ ಇತರೆ ಹಿರಿಯ ನಾಯಕರನ್ನು ಭೇಟಿ ಮಾಡಿದ್ದು, ಬಿಜೆಪಿ ಸೇರುವ ಕುರಿತು ಚರ್ಚೆ ನಡೆಸಿದ್ದಾರೆ.
ರಿಟಾ ಬಹುಗುಣ ಜೋಶಿ ಅವರು ಮಾಸ್ ಲೀಡರ್ ಏನಲ್ಲ. ಆದರೆ ಕಾಂಗ್ರೆಸ್ ನಲ್ಲಿ ಚುನಾವಣಾ ತಂತ್ರಗಾರಿಕೆ ರೂಪಿಸುವ ನಿಪೂಣೆಯಾಗಿದ್ದರು. ಹೀಗಾಗಿ ಅವರು ಬಿಜೆಪಿ ಸೇರುತ್ತಿರುವುದು ಸೋನಿಯಾ ಗಾಂಧಿ ನೇತೃತ್ವದ ಕಾಂಗ್ರೆಸ್ ಗೆ ಭಾರಿ ಹಿನ್ನಡೆಯಾಗುವ ಸಾಧ್ಯತೆ ಇದೆ.
ಒಂದು ಬಾರಿ ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದ ಜೋಶಿ ಅವರು, ಅವರ ಸಹೋದರ ಉತ್ತರಾಖಂಡ್ ಮಾಜಿ ಮುಖ್ಯಮಂತ್ರಿ ವಿಜಯ್ ಬಹುಗುಣ ಅವರು ಬಿಜೆಪಿ ಸೇರಿದ ನಂತರ ಸೈಡ್ ಲೈನ್ ಆಗಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.