ಸಾಂದರ್ಭಿಕ ಚಿತ್ರ 
ದೇಶ

ರದ್ದಾಗಿದ್ದ ತಮಿಳುನಾಡು ವಿಧಾನಭೆಯ 2 ಸ್ಥಾನಗಳಿಗೆ ನವೆಂಬರ್ 19ರಂದು ಚುನಾವಣೆ

ಕಳೆದ ಮೇನಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ವೇಳೆ ಮತದಾರರ ಮೇಲೆ ಪ್ರಭಾವ ಬೀರಲು ಹಣ ಹಂಚಿಕೆ.....

ನವದೆಹಲಿ: ಕಳೆದ ಮೇನಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ವೇಳೆ ಮತದಾರರ ಮೇಲೆ ಪ್ರಭಾವ ಬೀರಲು ಹಣ ಹಂಚಿಕೆ ಮಾಡುತ್ತಿರುವ ಬಗ್ಗೆ ಸಾಕ್ಷ್ಯ ದೊರೆತ ರದ್ದಾಗಿದ್ದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ನವೆಂಬರ್ 19ರಂದು ಚುನಾವಣೆ ನಡೆಯಲಿದೆ.
ಕೇಂದ್ರ ಚುನಾವಣಾ ಆಯೋಗ ಇಂದು ತಮಿಳುನಾಡಿನ ಅರವಕುರಿಚಿ ಮತ್ತು ತಂಜಾವುರ್ ವಿಧಾನಸಭಾ ಕ್ಷೇತ್ರಗಳ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ನವೆಂಬರ್ 19ರಂದು ಮತದಾನ ನಡೆಯಲಿದೆ.
ಆಯೋಗ ಅಕ್ಟೋಬರ್ 26ರಂದು ಅಧಿಸೂಚನೆ ಹೊರಡಿಸುತ್ತಿದ್ದು, ನವೆಂಬರ್ 19ಕ್ಕೆ ಮತದಾನ ಹಾಗೂ ನವೆಂಬರ್ 22ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ.
ತಮಿಳುನಾಡು ಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ಮುಖ್ಯಸ್ಥ ಜೆ.ಜಯಲಲಿತಾ ಅವರು ಆಸ್ಪತ್ರೆಯಲ್ಲಿರುವ ಸಂದರ್ಭದಲ್ಲೇ ಚುನಾವಣೆ ನಡೆಯುತ್ತಿದ್ದು, ಆಡಳಿತರೂಢ ಜಯಾ ಅನಪಸ್ಥಿತಿಯಲ್ಲೇ ಚುನಾವಣೆ ಎದುರಿಸಬೇಕಾಗಿದೆ.
ಮತದಾರರ ಮೇಲೆ ಪ್ರಭಾವ ಬೀರಲು ಹಣ ಹಂಚಿಕೆ ಮಾಡಿದ ಸಾಕ್ಷ್ಯ ದೊರೆತ ಹಿನ್ನೆಲೆಯಲ್ಲಿ ಚುನಾವಣಾ ಅಧಿಸೂಚನೆ ರದ್ದಾಗಿದ್ದು ಭಾರತದ ಚುನಾವಣೆ ಇತಿಹಾಸದಲ್ಲೇ ಇದೇ ಮೊದಲು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT