ಮತ್ತೆ ವಿವಾದದಲ್ಲಿ ರಾಧೆ ಮಾ: ಶೂ ಧರಿಸಿ ಗಂಗಾ ಪೂಜೆ 
ದೇಶ

ಮತ್ತೆ ವಿವಾದದಲ್ಲಿ ರಾಧೆ ಮಾ: ಶೂ ಧರಿಸಿ ಗಂಗಾ ಪೂಜೆ

ತುಂಡುಡುಗೆ ಧರಿಸಿ ವಿವಾದಕ್ಕೀಡಾಗಿದ್ದ ಸ್ವಯಂ ಘೋಷಿತ ದೇವ ಮಹಿಳೆ ರಾಧೆ ಮಾ ಇದೀಗ ಮತ್ತೊಂದು ವಿವಾದದ ಸುಳಿಯಲ್ಲಿ ಸಿಲುಕಿಕೊಂದಿದ್ದಾರೆ...

ಹರಿದ್ವಾರ: ತುಂಡುಡುಗೆ ಧರಿಸಿ ವಿವಾದಕ್ಕೀಡಾಗಿದ್ದ ಸ್ವಯಂ ಘೋಷಿತ ದೇವ ಮಹಿಳೆ ರಾಧೆ ಮಾ ಇದೀಗ ಮತ್ತೊಂದು ವಿವಾದದ ಸುಳಿಯಲ್ಲಿ ಸಿಲುಕಿಕೊಂದಿದ್ದಾರೆ.

ಹರಿದ್ವಾರದಲ್ಲಿ ನಡೆದ ಗಂಗಾ ಪೂಜೆ ವೇಳೆ ರಾಧೆ ಮಾ ಅವರು ಕಾಲಿಗೆ ಶೂ ಧರಿಸಿ ಗಂಗಾ ಆರತಿ ಮಾಡಿದ್ದಾರೆಂದು ಹೇಳಲಾಗುತ್ತಿದೆ.

ಮುಂಬೈ ನಲ್ಲಿ ಎರಡು ದಿನಗಳ ಧಾರ್ಮಿಕ ಯಾತ್ರೆ ನಡೆಯಲಿದ್ದು, ಹರಿದ್ವಾರಕ್ಕೆ ರಾಧೆ ಮಾ ನಿನ್ನೆ ಭೇಟಿ ನೀಡಿದ್ದರು. ಈ ವೇಳೆ ಗಂಗಾ ಪೂಜೆಯಲ್ಲಿ ಭಾಗಿಯಾಗಿದ್ದ ಅವರು ಕಾಲಿಗೆ ಶೂ ತೆಗೆಯದೆಯೇ ಆರತಿ ಮಾಡಿದ್ದಾರೆ. ಅಲ್ಲದೆ, ಸ್ಥಳದಲ್ಲಿ ಅಶ್ಲೀಲವಾಗಿ ನೃತ್ಯ ಮಾಡಿದ್ದಾರೆಂದು ಹೇಳಲಾಗುತ್ತಿದೆ.

ರಾಧೆ ಮಾ ಅವರ ಈ ವರ್ತನೆಗೆ ಅರ್ಚಕರು ಹಾಗೂ ಹಿಂದೂ ಪರ ಸಮುದಾಯಗಳು ಅಕ್ರೋಶ ವ್ಯಕ್ತಪಡಿಸುತ್ತಿದ್ದು, ರಾಧೆ ಮಾ ಅವರು ಗಂಗಾ ಆರತಿಯ ಪಾವಿತ್ರ್ಯತೆಯನ್ನು ಉಲ್ಲಂಘಿಸಿದ್ದಾರೆಂಬ ಮಾತುಗಳು ಕೇಳಿಬರುತ್ತಿವೆ.

ರಾಧೆ ಮಾ ಅವರು ಶೂ ಧರಿಸಿ ಗಂಗಾ ಆರತಿ ಮಾಡುತ್ತಿರುವ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿದ್ದು, ಸಾಕಷ್ಟು ವಿರೋಧಗಳು ವ್ಯಕ್ತವಾಗುತ್ತಿವೆ. ಫೋಟೋದಲ್ಲಿರುವ ಪ್ರಕಾರ ರಾಧೆ ಮಾ ಅವರು ಹರಿದ್ವಾರದ ಮೆಟ್ಟಿಲ ಮೇಲೆ ಕೆಂಪು ಶೂ ಧರಿಸಿ ನಿಂತು ಗಂಗಾ ಆರತಿ ಮಾಡುತ್ತಿರುವುದು ಕಂಡು ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT