ತೆಲಂಗಾಣ ಸರ್ಕಾರ ಸಲಹೆಗಾರ ವಿದ್ಯಾಸಾಗರ್ ರಾವ್ (ಸಂಗ್ರಹ ಚಿತ್ರ) 
ದೇಶ

ಕೃಷ್ಣಾ ಐ ತೀರ್ಪು ಪ್ರಶ್ನಿಸಿ ಸುಪ್ರಿಂ ಮೆಟ್ಟಿಲೇರಲು ಆಂಧ್ರ, ತೆಲಂಗಾಣ ನಿರ್ಧಾರ!

ಆಂಧ್ರ ಪ್ರದೇಶದ ಪಾಲಿನ ನೀರನ್ನೇ ತೆಲಂಗಾಣ ಹಂಚಿಕೊಳ್ಳಬೇಕು ಎಂಬ ಕೃಷ್ಣಾ ನ್ಯಾಯಾಧಿಕರಣದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಸರ್ಕಾರಗಳು ನಿರ್ಧರಿಸಿವೆ ಎಂದು ತಿಳಿದುಬಂದಿದೆ.

ನವದೆಹಲಿ: ಆಂಧ್ರ ಪ್ರದೇಶದ ಪಾಲಿನ ನೀರನ್ನೇ ತೆಲಂಗಾಣ ಹಂಚಿಕೊಳ್ಳಬೇಕು ಎಂಬ ಕೃಷ್ಣಾ ನ್ಯಾಯಾಧಿಕರಣದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಆಂಧ್ರ ಪ್ರದೇಶ  ಹಾಗೂ ತೆಲಂಗಾಣ ಸರ್ಕಾರಗಳು ನಿರ್ಧರಿಸಿವೆ ಎಂದು ತಿಳಿದುಬಂದಿದೆ.

ಕೃಷ್ಣಾ ನ್ಯಾಯಾಧಿಕರಣದ ತೀರ್ಪಿನ ಕುರಿತಂತೆ ಉಭಯ ರಾಜ್ಯಗಳು ಅಸಮಾಧಾನ ವ್ಯಕ್ತಪಡಿಸಿದ್ದು, ತೀರ್ಪಿನ ಕುರಿತು ಮರು ಪರಿಶೀಲನೆ ನಡೆಸುವಂತೆ ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ  ಸಲ್ಲಿಸುವುದಾಗಿ ಹೇಳಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ತೆಲಂಗಾಣ ರಾಜ್ಯ ಸರ್ಕಾರದ ಸಲಹೆಗಾರ ವಿದ್ಯಾಸಾಗರ್ ರಾವ್ ಅವರು, ಈ ಹಿಂದಿನ ಐ ತೀರ್ಪಿನಲ್ಲಿ ಅವಿಭಜಿತ ಆಂಧ್ರ ಪ್ರದೇಶಕ್ಕೆ  ಅನ್ಯಾಯವಾಗಿತ್ತು. ಇನ್ನೂ ಸುಮಾರು 200 ರಿಂದ 205 ಟಿಎಂಸಿ ನೀರು ಅವಿಭಜಿತ ಆಂಧ್ರ ಪ್ರದೇಶಕ್ಕೆ ಬರಬೇಕಿತ್ತು. ಹೀಗಾಗಿ ತೀರ್ಪು ಮರು ಪರಿಶೀಲಿಸುವಂತೆ ಕೋರಲಾಗಿತ್ತು.

ತೆಲಂಗಾಣ ರಾಜ್ಯ ರಚನೆ ಬಳಿಕ ಈ ಹಿಂದಿನ ಮನವಿ ಸೇರಿದಂತೆ ಯೋಜನಾವಾರು ನೀರು ಹಂಚಿಕೆ ಮಾಡುವಂತೆ ನ್ಯಾಯಾಧಿಕರಣದಲ್ಲಿ ಕೋರಲಾಗಿತ್ತು. ಆದರೆ ಕೃಷ್ಣಾ ನ್ಯಾಯಾಧಿಕರಣ ಈ  ಹಿಂದಿನ ಐತೀರ್ಪನ್ನೇ ಎತ್ತಿ ಹಿಡಿದು, ಆಂಧ್ರ ಪ್ರದೇಶಕ್ಕೆ ಹಂಚಿಕೆ ಮಾಡಲಾಗಿದ್ದ ನೀರಲ್ಲೇ ಪಾಲು ಪಡೆಯುವಂತೆ ಆದೇಶಿಸಿದೆ. ಇದರಿಂದಾಗಿ ಹೆಚ್ಚುವರಿ ನೀರು ಪಡೆಯುವ ನಮ್ಮ ಮೂಲ  ಬೇಡಿಕೆ ಇಡೇರಿಲ್ಲ. ಹೀಗಾಗಿ ತೀರ್ಪು ಮರು ಪರಿಶೀಲನೆ ನಡೆಸುವಂತೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್