ಸಲ್ಮಾನ್ ಖಾನ್ 
ದೇಶ

ತಕ್ಷಣ ಶರಣಾಗುವಂತೆ ಸಲ್ಮಾನ್ ಖಾನ್ ಗೆ ಸೂಚಿಸಿ: ಸುಪ್ರೀಂಗೆ ರಾಜಸ್ಥಾನ ಮನವಿ

ಕೃಷ್ಣ ಮೃಗ ಭೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ್ ಸಲ್ಮಾನ್ ಖಾನ್ ಅವರಿಗೆ ತಕ್ಷಣ ಶರಣಾಗುವಂತೆ ಸೂಚಿಸಬೇಕು...

ಜೈಪುರ: ಕೃಷ್ಣ ಮೃಗ ಭೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ್ ಸಲ್ಮಾನ್ ಖಾನ್ ಅವರಿಗೆ ತಕ್ಷಣ ಶರಣಾಗುವಂತೆ ಸೂಚಿಸಬೇಕು ಎಂದು ರಾಜಸ್ಥಾನ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದೆ.
ಕೃಷ್ಣ ಮೃಗ ಬೇಟೆಗೆ ಸಂಬಂಧಿಸಿದ್ದಂತೆ ಸಲ್ಮಾನ್ ವಿರುದ್ಧದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಾಲಿವುಡ್ ನಟನಿಗೆ ಕ್ಲೀನ್ ಚಿಟ್ ನೀಡಿದ್ದ ಹೈಕೋರ್ಟ್ ತೀರ್ಪು ಪ್ರಶ್ನಿಸಿ ರಾಜಸ್ಥಾನ ಸರ್ಕಾರ ಸುಪ್ರೀಂ ಕೋರ್ಟ್ ಗೆ ಇಂದು ಮೇಲ್ಮನವಿ ಸಲ್ಲಿಸಿದ್ದು, ಈ ಕೂಡಲೇ ಅವರಿಗೆ ಶರಣಾಗುವಂತೆ ಸೂಚಿಸುವ ಮೂಲಕ ಜೈಲಿಗೆ ಕಳುಹಿಸಬೇಕು ಎಂದು ಮನವಿ ಮಾಡಿದೆ.
ಶೂಟಿಂಗ್ ವೇಳೆ  ಕೃಷ್ಣ ಮೃಗ ಬೇಟೆಗೆ ಸಂಬಂಧಿಸಿದ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ ಸೂಕ್ತ ಸಾಕ್ಷ್ಯಾಧಾರಗಳಿಲ್ಲ ಎಂದು ಹೇಳಿ ರಾಜಸ್ಥಾನ ಹೈಕೋರ್ಟ್ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಜುಲೈ 25 ರಂದು ಖುಲಾಸೆಗೊಳಿಸಿ ತೀರ್ಪು ನೀಡಿತ್ತು.
1998ರಲ್ಲಿ ಹಮ್ ಸಾಥ್ ಸಾಥ್ ಹೈ ಸಿನಿಮಾ ಶೂಟಿಂಗ್​ವೇಳೆ ಜೋಧ್ ಪುರದ ಬಳಿಯಲ್ಲಿರುವ ಕಂಕಣಿ ಗ್ರಾಮದಲ್ಲಿ ಸಲ್ಮಾನ್ ಖಾನ್​ ಕೃಷ್ಣಮೃಗ ಬೇಟೆ ಮತ್ತು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲು ವಿರುದ್ಧ ಎರಡು ದೂರು ದಾಖಲಾಗಿದ್ದವು.
ಸಲ್ಮಾನ್ ಖಾನ್ ವಿರುದ್ಧ ವನ್ಯಜೀವಿ ರಕ್ಷಣಾ ಕಾಯ್ದೆ 51ರ ಅಡಿ 2 ಪ್ರತ್ಯೇಕ ಪ್ರಕರ ಣಗಳು ದಾಖಲಾಗಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್