ದೇಶ

ಫೆ.1ರಂದು ಕೇಂದ್ರ ಬಜೆಟ್ ಮಂಡನೆ ಸಾಧ್ಯತೆ, ಚು.ಆಯೋಗದಿಂದ ಆಕ್ಷೇಪ ಇಲ್ಲ

Lingaraj Badiger
ನವದೆಹಲಿ: ಈ ಬಾರಿ ಫೆಬ್ರವರಿ 1ರಂದು 2017-18ನೇ ಸಾಲಿನ ಬಜೆಟ್ ಮಂಡನೆಯಾಗುವ ಸಾಧ್ಯತೆ ಇದ್ದು, ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗ ಸಹ ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ಪ್ರತಿ ವರ್ಷ ಫೆಬ್ರವರಿ ಕೊನೆ ದಿನದಂದು ಕೇಂದ್ರ ಬಜೆಟ್ ಮಂಡನೆಯಾಗುತ್ತಿತ್ತು. ಆದರೆ ಈ ಬಾರಿ ಅದಕ್ಕು ಮುನ್ನವೇ ಬಜೆಟ್ ಮಂಡಿಸುವ ಕೇಂದ್ರ ಸರ್ಕಾರದ ಪ್ರಸ್ತಾವಕ್ಕೆ ಚುನಾವಣಾ ಆಯೋಗ ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ. ಆದರೆ ನೀತಿ ಸಂಹಿತೆ ಉಲ್ಲಂಘನೆಯಾಗದಿರುವ ಬಗ್ಗೆ ಖಚಿತಪಡಿಸುವಂತೆ ಸೂಚಿಸಿದೆ.
ಕೇಂದ್ರ ಸರ್ಕಾರ ಇತ್ತೀಚಿಗಷ್ಟೇ 92 ವರ್ಷಗಳ ರೇಲ್ವೆ ಬಜೆಟ್ ಗೆ ಗುಡ್ ಬೈ ಹೇಳಿ, ಅದನ್ನು ಸಾಮಾನ್ಯ ಬಜೆಟ್ ನಲ್ಲಿ ವಿಲೀನಗೊಳಿಸಿತ್ತು. ಇದೀಗ ಫೆಬ್ರವರಿ ಕೊನೆ ದಿನದಂದು ಸಾಮಾನ್ಯ ಬಜೆಟ್ ಮಂಡಿಸುವ ದಶಕಗಳ ಸಂಪ್ರದಾಯಕ್ಕೂ ವಿದಾಯ ಹೇಳಲಾಗುತ್ತಿದೆ.
ಚುನಾವಣಾ ಆಯೋಗ ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ್ ಗೋವಾ ಹಾಗೂ ಮಣಿಪುರ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಿಸಿದರೆ ಮಾತ್ರ ಕೇಂದ್ರ ಬಜೆಟ್ ಗೆ ನೀತಿ ಸಂಹಿತೆ ಅಡ್ಡಿಯಾಗುವ ಸಾಧ್ಯತೆ ಇದೆ.
SCROLL FOR NEXT