6 ಉಗ್ರರ ಗಡಿ ನುಸುಳುವಿಕೆ ಯತ್ನ ವಿಫಲಗೊಳಿಸಿದ ಭಾರತೀಯ ಸೇನೆ
ಭಾರತದ ಗಡಿ ನುಸುಳಲು ಯತ್ನಿಸುತ್ತಿದ್ದ ಆರು ಉಗ್ರರನ್ನು ಭಾರತೀಯ ಸೇನೆ ಯೋಧರು ಹಿಮ್ಮೆಟ್ಟಿಸಿದ್ದಾರೆ.
ಜಮ್ಮು: ಭಾರತದ ಗಡಿ ನುಸುಳಲು ಯತ್ನಿಸುತ್ತಿದ್ದ ಆರು ಉಗ್ರರನ್ನು ಭಾರತೀಯ ಸೇನೆ ಯೋಧರು ಹಿಮ್ಮೆಟ್ಟಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಆರು ಉಗ್ರರು ಗಡಿ ನಸುಳಲು ಯತ್ನಿಸುತ್ತಿದ್ದರು. ಈ ವೇಳೆ ಉಗ್ರರು ಹಾಗೂ ಬಿಎಸ್ಎಫ್ ಯೋಧರ ನಡುವೆ ಭಾರಿ ಗುಂಡಿನ ಕಾಳಗ ನಡೆದಿದ್ದು ಕೊನೆಗೆ ಉಗ್ರರನ್ನು ಹಿಮ್ಮೆಟ್ಟಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ.
ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಸೀಮಿತ ದಾಳಿ ನಡೆಸಿ ಹಲವು ಉಗ್ರ ಶಿಬಿರಗಳನ್ನು ದ್ವಂಸಗೈದ ನಂತರ ಭಾರತದೊಳಗೆ ನುಸುಳಲು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಗುರುವಾರ ಮಧ್ಯರಾತ್ರಿ ಸುಮಾರು 6 ಉಗ್ರರಿದ್ದ ತಂಡವೊಂದು ಗಸ್ತು ತಿರುಗುತ್ತಿದ್ದ ಬಿಎಸ್ಎಫ್ ಯೋಧರ ವಾಹನದ ಮೇಲೆ ರಾಕೆಟ್ ಲಾಂಚರ್ ಮೂಲಕ ದಾಳಿ ನಡೆಸಿದ್ದಾರೆ.
ಉಗ್ರರ ದಾಳಿಯಿಂದ ಎಚ್ಚೆತ್ತ ಬಿಎಸ್ಎಫ್ ಯೋಧರು ಉಗ್ರರೊಂದಿಗೆ ಸುಮಾರು 20 ನಿಮಿಷಗಳ ಕಾಲ ಗುಂಡಿನ ಚಕಮಿಕಿ ನಡೆಸಿದ್ದಾರೆ. ಭಾರತೀಯ ಯೋಧರ ದಾಳಿಗೆ ಹೆದರಿದ ಉಗ್ರರು ಹಿಮ್ಮೆಟ್ಟಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.