ಜಮ್ಮು: ಜಮ್ಮು-ಕಾಶ್ಮೀರದ ಪೂಂಚ್ ಸೆಕ್ಟರ್ ನಲ್ಲಿ ಭಯೋತ್ಪಾದಕರ ಒಳನುಸುಳುವಿಕೆಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಪೂಂಚ್ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಒಳ ನುಸುಳಲು ಯತ್ನಿಸುತ್ತಿದ್ದ ಉಗ್ರರ ಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ ಎಂದು ರಕ್ಷಣಾ ಇಲಾಖೆ ವಕ್ತಾರರು ಹೇಳಿದ್ದಾರೆ. ಅ.20 ರಂದೂ ಸಹ ಭಾರತೀಯ ಸೇನೆ ಕಥುವಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ಬಳಿ ಉಗ್ರರ ಒಳನುಸುಳುವಿಕೆ ಯತ್ನವನ್ನು ವಿಫಲಗಳಿಸಿತ್ತು.
2-3 ವ್ಯಕ್ತಿಗಳ ಅನುಮಾನಾಸ್ಪದ ನಡೆಯನ್ನು ಗುರುತಿಸಿದ್ದ ಸೇನೆ, ಭಾರತದ ಗಡಿಯೊಳಗೆ ನುಸುಳದಂತೆ ಎಚ್ಚರಿಕೆ ವಹಿಸಿದೆ ಎಂದು ಸೇನಾ ವಕ್ತಾರರು ಹೇಳಿದ್ದಾರೆ. ಈ ವೇಳೆ ಉಗ್ರರು ಹಾಗೂ ಸೇನಾ ಪಡೆ ನಡುವೆ ಗುಂಡಿನ ಚಕಮಕಿ ಸಹ ನಡೆದಿದ್ದು ಸೇನೆ ಉಗ್ರರಿಗೆ ತಕ್ಕ ಪ್ರತ್ಯುತ್ತರ ನೀಡಿದೆ. ಅ.20 ರಂದು 4-6 ಭಯೋತ್ಪಾದಕರು ಭಾರತದೊಳಗೆ ನುಸುಳಲು ಯತ್ನಿಸಿದ್ದರು.