ಭಾರತದ ಚಲನಚಿತ್ರ ಮತ್ತು ಕಿರುತೆರೆ ನಿರ್ಮಾಪಕರ ಸಂಘದ ಅಧ್ಯಕ್ಷ ಮುಕೇಷ್ ಭಟ್ 
ದೇಶ

ಭವಿಷ್ಯದಲ್ಲಿ ಎಂದಿಗೂ ಪಾಕ್ ಕಲಾವಿದರೊಂದಿಗೆ ಕೆಲಸ ಮಾಡೋಲ್ಲ: ಮುಖೇಶ್ ಭಟ್

ಪಾಕಿಸ್ತಾನ ಕಲಾವಿದ ಫವಾದ್ ಖಾನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ 'ಎ ದಿಲ್ ಹೇ ಮುಷ್ಕಿಲ್' ಚಿತ್ರ ವಿವಾದಕ್ಕೆ ಸಂಬಂಧಿಸಿದಂತೆ ಮುಂದೆ ಭವಿಷ್ಯದಲ್ಲಿ ಎಂದಿಗೂ ಪಾಕಿಸ್ತಾನ ಕಲಾವಿದರೊಂದಿಗೆ ಕೆಲಸ ಮಾಡುವುದಿಲ್ಲ ಎಂದು...

ಮುಂಬೈ: ಪಾಕಿಸ್ತಾನ ಕಲಾವಿದ ಫವಾದ್ ಖಾನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ 'ಎ ದಿಲ್ ಹೇ ಮುಷ್ಕಿಲ್' ಚಿತ್ರ ವಿವಾದಕ್ಕೆ ಸಂಬಂಧಿಸಿದಂತೆ ಮುಂದೆ ಭವಿಷ್ಯದಲ್ಲಿ ಎಂದಿಗೂ ಪಾಕಿಸ್ತಾನ ಕಲಾವಿದರೊಂದಿಗೆ ಕೆಲಸ ಮಾಡುವುದಿಲ್ಲ ಎಂದು ಭಾರತದ ಚಲನಚಿತ್ರ ಮತ್ತು ಕಿರುತೆರೆ ನಿರ್ಮಾಪಕರ ಸಂಘದ ಅಧ್ಯಕ್ಷ ಮುಕೇಷ್ ಭಟ್ ಅವರು ಹೇಳಿದ್ದಾರೆ.

ಕರಣ್ ಜೋಹರ್ ನಿರ್ದೇಶನದ ಎ ದಿಲ್ ಹೇ ಮುಷ್ಕಿಲ್ ಚಿತ್ರ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಕೇಷ್ ಭಟ್ ಅವರು ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ, ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಮಾತುಕತೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ ಪ್ರತಿಕ್ರಿಯೆ ನೀಡಿರುವ ಅವರು, ಚಿತ್ರ ನಿರ್ಮಾಪಕರು ಮುಂದೆ ಭವಿಷ್ಯದಲ್ಲಿ ಎಂದಿಗೂ ಪಾಕಿಸ್ತಾನ ಕಲಾವಿದರೊಂದಿಗೆ ಕೆಲಸ ಮಾಡುವುದಿಲ್ಲ. ಇದು ನಮ್ಮ ಮಂಡಳಿಯ ನಿರ್ಣಯವಾಗಿದ್ದು, ಮಂಡಳಿಯ ನಿರ್ಣಯವನ್ನು ಪಾಲಿಸುವಂತೆ ಎಲ್ಲಾ ನಿರ್ಮಾಪಕರಿಗೂ ಸೂಚನೆ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ದೇಶದ ಜನತೆಯ ಭಾವನೆಗಳಿಗೆ ಮೊದಲ ಆದ್ಯತೆಯನ್ನು ನೀಡಬೇಕು. ರಕ್ಷಣಾ ಸಚಿವಾಲಯದ ಕಲ್ಯಾಣಕ್ಕೆ ಸಹಾಯ ಮಾಡುವುದಾಗಿ ಕರಣ್ ಜೋಹರ್ ಸೇರಿದಂತೆ ಇನ್ನಿತರೆ ನಿರ್ಮಾಪಕರು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT