ನವದೆಹಲಿ: ಅಕ್ಟೋಬರ್ 22 ಮತ್ತು 23 ರಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಗುಜರಾತ್ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆಂದು ಶನಿವಾರ ತಿಳಿದುಬಂದಿದೆ.
ಅಕ್ಟೋಬರ್ 23 ರಂದು ಭರುಚ್ ನಲ್ಲಿ ನವೀಕರಣ ಮಾಡಲಾಗಿರುವ ಸೇವಾಶ್ರಮ ಆಸ್ಪತ್ರೆಯನ್ನು ಉದ್ಘಾಟನೆ ಮಾಡಲಿದ್ದಾರೆ. ಇದೇ ದಿನದಂದು ಅಂಕ್ಲೇಶ್ವರ್ ನ ಸರ್ದಾರ್ ವಲ್ಲಭಭಾಯಿ ಪಟೇಲ್ ಹಾರ್ಟ್ ಇನ್ಸ್ಟಿಟ್ಯೂಟ್ ನ್ನು ಉದ್ಘಾಟನೆ ಮಾಡಲಿದ್ದಾರೆಂದು ಹೇಳಲಾಗುತ್ತಿದೆ.
ಸಮರ್ಪಣ್ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನುದ್ದೇಶಿ ಭಾಷಣ ಮಾಡಲಿದ್ದು, ದೆಹಲಿಗೆ ತೆರಳುವುದಕ್ಕೂ ಮುನ್ನ ಕೇಂದ್ರ ಮಾಜಿ ಸಚಿವ ಮತ್ತು ಗುಜರಾತ್ ಮಾಜಿ ಮುಖ್ಯಮಂತ್ರಿ ಮಾಧವ್ ಸಿನ್ಹ್ ಸೋಲಂಕಿಯವರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.