ಶಿವಪಾಲ್ ಯಾದವ್ - ಆದಿತ್ಯ ಯಾದವ್ 
ದೇಶ

ಸಮಾಜವಾದಿ ಪಕ್ಷಕ್ಕೆ ಬಹಮತ ಸಿಗಲ್ಲ: ಶಿವಪಾಲ್ ಪುತ್ರ ಆದಿತ್ಯ ಯಾದವ್

ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಸಮಾಜವಾದಿ ಪಕ್ಷಕ್ಕೆ ಸರಳ ಬಹುಮತವೂ ದೊರೆಯುವುದಿಲ್ಲ ಎಂದು ಸಮಾಜವಾದಿ...

ಆಗ್ರ: ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಸಮಾಜವಾದಿ ಪಕ್ಷಕ್ಕೆ ಸರಳ ಬಹುಮತವೂ ದೊರೆಯುವುದಿಲ್ಲ ಎಂದು ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ಶಿವಪಾಲ್ ಯಾದವ್ ಅವರ ಪುತ್ರ ಆದಿತ್ಯ ಯಾದವ್ ಅವರು ಶುಕ್ರವಾರ ಹೇಳಿದ್ದಾರೆ.
403 ಸದಸ್ಯ ಬಲವನ್ನು ಹೊಂದಿರುವ ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಆಡಳಿತರೂಢ ಸಮಾಜವಾದಿ ಪಕ್ಷಕ್ಕೆ ಸುಮಾರು 170 ಸ್ಥಾನಗಳು ದೊರೆಯಲಿವೆ ಎಂದು ನಮ್ಮ ಆಂತರಿಕ ಸಮೀಕ್ಷೆ ಹೇಳುತ್ತಿದೆ ಎಂದು ಆದಿತ್ಯ ಯಾದವ್ ಅವರು ತಿಳಿಸಿದ್ದಾರೆ.
ಆದಾಗ್ಯೂ, ಸಮಾಜವಾದಿ ಪಕ್ಷ ಮುಂದಿನ ಸರ್ಕಾರ ರಚನೆ ಮಾಡುವುದಿಲ್ಲ ಅಂತ ನೀವು ಒಪ್ಪಿಕೊಳ್ಳುತ್ತೀರಾ? ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಯಾದವ್, ನಾವು ಕನಿಷ್ಠ 170 ಸ್ಥಾನಗಳಲ್ಲಿ ಗೆಲ್ಲಬಹುದು. ಆದರೆ ಮುಂದಿನ ದಿನಗಳಲ್ಲಿ ನಮ್ಮ ಪಕ್ಷದ ಬಗ್ಗೆ ಒಲವು ಹೆಚ್ಚಿದರೆ ಸರ್ಕಾರ ರಚನೆ ಮಾಡಲು ಸಾಧ್ಯ ಎಂದಿದ್ದಾರೆ.
ನಿನ್ನೆಯಷ್ಟೆ ಶಿವಪಾಲ್ ಯಾದವ್ ಅವರು ಒಂದು ವೇಳೆ ಪಕ್ಷ ಮತ್ತೆ ಅಧಿಕಾರಕ್ಕೆ ಬಂದರೆ ಅಖಿಲೇಶ್ ಯಾದವ್ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!