ಬಹುಮತ ಸಾಬೀತುಪಡಿಸುವಂತೆ ಅಖಿಲೇಶ್ ಯಾದವ್ ಗೆ ಬಿಜೆಪಿ ಸವಾಲು
ಸಮಾಜವಾದಿ ಪಕ್ಷದಲ್ಲಿ ನಾಯಕತ್ವದ ವಿಚಾರವಾಗಿ ಭಿನ್ನಮತ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಅಖಿಲೇಶ್ ಯಾದವ್ ಗೆ ಬಿಜೆಪಿ ಸವಾಲು ಹಾಕಿದೆ.
ಲಖನೌ: ಸಮಾಜವಾದಿ ಪಕ್ಷದಲ್ಲಿ ನಾಯಕತ್ವದ ವಿಚಾರವಾಗಿ ಭಿನ್ನಮತ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಅಖಿಲೇಶ್ ಯಾದವ್ ಗೆ ಬಿಜೆಪಿ ಸವಾಲು ಹಾಕಿದೆ.
ಸಿಎಂ ಅಖಿಲೇಶ್ ಯಾದವ್ ಶಿವಪಾಲ್ ಯಾದವ್ ಸೇರಿದಂತೆ 4 ಸಚಿವರನ್ನು ವಜಾಗೊಳಿಸಿರುವುದು ಹಾಗೂ ಇದಕ್ಕೆ ಪ್ರತಿಯಾಗಿ ಸಮಾಜವಾದಿ ಪಕ್ಷ ಅಖಿಲೇಶ್ ಯಾದವ್ ಅವರ ಬೆಂಬಲಿಗರಾದ ರಾಮ್ ಗೋಪಾಲ್ ಯಾದವ್ ಅವರನ್ನು ಉಚ್ಛಾಟಿಸಿರುವ ಬೆಳವಣಿಗೆ ಹಿನ್ನೆಲೆಯಲ್ಲಿ ಬಿಜೆಪಿ ಅಖಿಲೇಶ್ ಯಾದವ್ ಗೆ ಬಹುಮತ ಸಾಬೀತುಪಡಿಸುವಂತೆ ಸವಾಲು ಹಾಕಿದೆ. ಉತ್ತರ ಪ್ರದೇಶದ ಅಖಿಲೇಶ್ ಯಾದವ್ ನೇತೃತ್ವದ ಸರ್ಕಾರ ಬಹುಮತ ಕಳೆದುಕೊಂಡಿದ್ದು ಅಖಿಲೇಶ್ ಯಾದವ್ ಬಹುಮತ ಸಾಬೀತುಪಡಿಸಲಿ ಎಂದು ಬಿಜೆಪಿ ರಾಜ್ಯಅಧ್ಯಕ್ಷ ಕೇಶವ್ ಪ್ರಸಾದ್ ಮೌರ್ಯ ಒತ್ತಾಯಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಕುಟುಂಬ ರಾಜಕಾರಣಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತಿದ್ದು ಜನರ ಸಮಸ್ಯೆಗಳನ್ನು ಕಡೆಗಣಿಸಲಾಗುತ್ತಿದೆ ಎಂದು ಮೌರ್ಯ ಆರೋಪಿಸಿದ್ದಾರೆ.