BSF martyr Gurnam Singh 
ದೇಶ

ಹುತಾತ್ಮ ಯೋಧ ಗುರ್ನಾಮ್ ಸಿಂಗ್ ಹೆಸರಿನಲ್ಲಿ ಬಿಎಸ್ಎಫ್ ಆಸ್ಪತ್ರೆ ನಿರ್ಮಿಸಿ: ಕುಟುಂಬ ಸದಸ್ಯರ ಮನವಿ

ಗಡಿಯಲ್ಲಿ ಪಾಕಿಸ್ತಾನ ಸೈನಿಕರ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಗಾಯಗೊಂಡು ಹುತಾತ್ಮರಾದ ಯೋಧನ ಗುರ್ನಾಮ್ ಸಿಂಗ್ ಅವರ ಹೆಸರಿನಲ್ಲಿ ಆಸ್ಪತ್ರೆಯನ್ನು ಪ್ರಾರಂಭಿಸಬೇಕು...

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಗಡಿಯಲ್ಲಿ ಪಾಕಿಸ್ತಾನ ಸೈನಿಕರ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಗಾಯಗೊಂಡು ಹುತಾತ್ಮರಾದ ಯೋಧನ ಗುರ್ನಾಮ್ ಸಿಂಗ್ ಅವರ ಹೆಸರಿನಲ್ಲಿ ಆಸ್ಪತ್ರೆಯನ್ನು ಪ್ರಾರಂಭಿಸಬೇಕು ಎಂದು ಯೋಧರ ಕುಟುಂಬ ಸದಸ್ಯರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

"ನನ್ನ ಮಗ ದೇಶಕ್ಕಾಗಿ ಪ್ರಾಣ ನೀಡಿದ್ದಾನೆ. ಆತನ ಬಲಿದಾನದ ಬಗ್ಗೆ ನಮಗೆ ಹೆಮ್ಮೆ ಇದೆ. ದೇಶಕ್ಕಾಗಿ ಹುತಾತ್ಮನಾದ ಗುರ್ನಾಮ್ ಸಿಂಗ್ ಹೆಸರಿನಲ್ಲಿ ಆಸ್ಪತ್ರೆಯೊಂದನ್ನು ಪ್ರಾರಂಭಿಸಬೇಕು ಎಂದು ಹುತಾತ್ಮ ಯೋಧನ ತಂದೆ ಕುಲ್ಬಿರ್ ಸಿಂಗ್ ಮನವಿ ಮಾಡಿದ್ದಾರೆ. "ಹುತಾತ್ಮನಾದ ನನ್ನ ಮಗನ ಹೆಸರಿನಲ್ಲಿ ಕೇಂದ್ರ ಸರ್ಕಾರ ಬಿಎಸ್ಎಫ್ ಸಿಬ್ಬಂದಿಗಳಿಗಾಗಿಯೇ ಪ್ರತ್ಯೇಕವಾದ ಬಿಎಸ್ ಎಫ್ ಆಸ್ಪತ್ರೆಯೊಂದನ್ನು ಪ್ರಾರಂಭಿಸಲಿ, ಈ ಮೂಲಕ ಬಿಎಸ್ ಎಫ್ ನ ಎಲ್ಲಾ ಯೋಧರಿಗೆ ಒಳ್ಳೆಯ ಚಿಕಿತ್ಸೆ ಸಿಗುವಂತಾಗಬೇಕು ಎಂದು ಎಂದು ಗುರ್ನಾಮ್ ಸಿಂಗ್ ಅವರ ತಾಯಿ ಜಸ್ವಂತ್ ಕೌರ್ ಹೇಳಿದ್ದಾರೆ.
 
ಗಡಿಯಲ್ಲಿ ಕರ್ತವ್ಯನಿರ್ವಹಿಸುತ್ತಿದ್ದ ವೇಳೆ ಪಾಕಿಸ್ತಾನ ಸೈನಿಕರು ಭಾರತೀಯ ಸೇನೆ ಮೇಲೆ ಅಪ್ರಚೋದಿತ ಗುಂಡಿನ ದಾಳಿ ಮಾಡಿದ್ದರು. ದಾಳಿ ವೇಳೆ ಗುರ್ನಾಮ್ ಸಿಂಗ್ ಅವರ ತಲೆಗೆ ಗುಂಡು ತಗುಲಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಜಮ್ಮುವಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕಳೆದ ರಾತ್ರಿ 11.55ರ ಸುಮಾರಿಗೆ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

'ಸುಪ್ರೀಂ ಕೋರ್ಟ್‌ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?

ಕೊಲ್ಲಾಪುರ: ಮದುವೆಯಾಗಲು ನಿರಾಕರಿಸಿದ ಯುವತಿಯನ್ನು ಕಣಿವೆಗೆ ತಳ್ಳಿ ಕೊಲೆಗೈದ ಬಾಯ್​ಫ್ರೆಂಡ್​!

ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ: 3ನೇ ಜಲಾಂತರ್ಗಾಮಿ ನಿಗ್ರಹ ಯುದ್ಧನೌಕೆ 'INS ಮಂಗ್ರೋಲ್' ಸೇರ್ಪಡೆ-Video