ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹಾಗೂ ಬಿಜೆಪಿ ಸಂಸದ ಶತ್ರುಘ್ನ ಸಿನ್ಹಾ 
ದೇಶ

ಸಮಾಜವಾದಿ ಪಕ್ಷದಲ್ಲಿ ಬಿಕ್ಕಟ್ಟು: ಅಖಿಲೇಖ್ ಬೆನ್ನಿಗೆ ನಿಂತ ಶತ್ರುಘ್ನ ಸಿನ್ಹಾ

ಉತ್ತರಪ್ರದೇಶದ ಆಡಳಿತಾರೂಢ ಸಮಾಜವಾಗಿ ಪಕ್ಷದ ಆಂತರಿಕ ಬಿಕ್ಕಟ್ಟು ಇದೀಗ ಬೀದಿಗೆ ಬಂದಿದ್ದು, ಬಿಕ್ಕಟ್ಟಿನ ಸುಳಿಯಲ್ಲಿ ಸಿಲುಕಿಹಾಕಿಕೊಂಡಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಬೆಂಬಲಕ್ಕೆ ಸೋಮವಾರ ಬಿಜೆಪಿ ಸಂಸದ...

ನವದೆಹಲಿ: ಉತ್ತರಪ್ರದೇಶದ ಆಡಳಿತಾರೂಢ ಸಮಾಜವಾಗಿ ಪಕ್ಷದ ಆಂತರಿಕ ಬಿಕ್ಕಟ್ಟು ಇದೀಗ ಬೀದಿಗೆ ಬಂದಿದ್ದು, ಬಿಕ್ಕಟ್ಟಿನ ಸುಳಿಯಲ್ಲಿ ಸಿಲುಕಿಹಾಕಿಕೊಂಡಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಬೆಂಬಲಕ್ಕೆ ಸೋಮವಾರ ಬಿಜೆಪಿ ಸಂಸದ ಶತ್ರುಘ್ನ ಸಿನ್ಹಾ ಅವರು ಬಂದಿದ್ದಾರೆ,

ಸಮಾಜವಾದಿ ಪಕ್ಷದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಪಕ್ಷದಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಸುಳಿಯಲ್ಲಿ ಅಖಿಲೇಶ್ ಯಾದವ್ ಅವರು ಸಿಲುಕಿಹಾಕಿಕೊಂಡಿದ್ದಾರೆ. ನನ್ನ ಹೃದಯ ಅಖಿಲೇಶ್ ಬಗ್ಗೆ ಯೋಚಿಸುತ್ತಿದೆ. ಪಕ್ಷದಲ್ಲಿ ಉಂಟಾಗಿರುವ ರಾಜಕೀಯ ದುರಾವಸ್ಥೆಯಿಂದ ಶೀಘ್ರದಲ್ಲೇ ಅಖಿಲೇಶ್ ಅವರು ಹೊರಬರಲಿ ಎಂದು ಆಶಿಸುತ್ತೇನೆಂದು ಹೇಳಿದ್ದಾರೆ.

ಸಮಾಜವಾದಿ ಪಕ್ಷದ ನಾಯಕರಲ್ಲಿ ಆಂತರಿಕ ಕಲಹ ಉಲ್ಬಣಿಸುತ್ತಿರುವುದರ ಬೆನ್ನಲ್ಲೇ ಲಕ್ನೋದಲ್ಲಿನ ಸಮಾಜವಾದಿ ಪಕ್ಷದ ಮುಖ್ಯ ಕಚೇರಿ ಬಳಿ ಮುಲಾಯಂ ಸಿಂಗ್ ಯಾದವ್ ಹಾಗೂ ಅಖಿಲೇಶ್ ಯಾದವ್, ಶಿವಪಾಲ್ ಯಾದವ್ ಅವರ ಬೆಂಬಲಿಗರ ನಡುವೆ ವಾಗ್ವಾದ ನಡೆದು, ಅಲ್ಲಿನ ಪರಿಸ್ಥಿತಿ ಉದ್ವಿಘ್ನಕ್ಕೆ ತಿರುಗುವಂತಾಗಿದೆ.  

ಸಮಾಜವಾದಿ ಪಕ್ಷದ ಕಾರ್ಯಕರ್ತರು ಸ್ಥಳದಲ್ಲಿದ್ದ ಬ್ಯಾರಿಕೇಡ್ ಗಳನ್ನು ತಳ್ಳಿ ಕಚೇರಿಯೊಳಗೆ ನುಗ್ಗಲು ಯತ್ನ ನಡೆಸಿದ್ದಾರೆ. ಆದರೆ, ಸ್ಥಳದಲ್ಲಿ ಪೊಲೀಸರು ಕಾರ್ಯಕರ್ತರನ್ನು ತಡೆದು ಒಳ ನುಗ್ಗುವ ಅವರ ಪ್ರಯತ್ನವನ್ನು ವಿಫಲವಾಗುವಂತೆ ಮಾಡಿದ್ದಾರೆ. ಈ ವೇಳೆ ಪೊಲೀಸರು ಮತ್ತು ಕಾರ್ಯಕರ್ತರ ನಡುವೆಯೂ ಮಾತಿನ ಚಕಮಕಿಗಳು ನಡೆದಿವೆ ಎಂದು ವರದಿಗಳು ತಿಳಿಸಿವೆ.

ಸಮಾಜವಾದಿ ಪಕ್ಷದಲ್ಲಿ ನಿನ್ನೆ ಸಾಕಷ್ಟು ನಾಟಕೀಯ ಬೆಳವಣಿಗೆಗಳು ಕಂಡು ಬಂದಿದ್ದವು. ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು, ಶಿವಪಾಲ್ ಯಾದವ್ ಸೇರಿದಂತೆ ನಾಲ್ವರು ಸಚಿವರನ್ನು ವಜಾಗೊಳಿಸಿದ್ದರು. ಇದಕ್ಕೆ ತಿರುಗೇಟು ನೀಡಲು ಮುಂದಾದ ಸಮಾಜವಾದಿ ಪಕ್ಷ, ಅಖಿಲೇಶ್ ಯಾದವ್ ಅವರ ಬೆಂಬಲಿಗರಾದ ರಾಮ್ ಗೋಪಾಲ್ ಯಾದವ್ ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?