ಜಮ್ಮು ಮತ್ತು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಲ್ಲಿ ಅಶಾಂತಿ ಕದಡುವ ಸಲುವಾಗಿ ಉಗ್ರರು ದಾಳಿ ನಡೆಸುತ್ತಿದ್ದು, ಇದೀಗ ಜಮ್ಮು ಮತ್ತು ಕಾಶ್ಮೀರದ ಸಚಿವರ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಅನಂತ್ ನಾಗ್ ಜಿಲ್ಲೆಯಲ್ಲಿರುವ ಸಚಿವ ಅಬ್ದುಲ್ ರಹಮಾನ್ ಮನೆ ಮೇಲೆ ಉಗ್ರರು ದಾಳಿ ನಡೆಸಿದ್ದು, ಈ ವೇಳೆ ಸಚಿವರು ಮನೆಯಲ್ಲಿರಲಿಲ್ಲ ಎಂದು ಹೇಳಲಾಗಿದೆ. ಉಗ್ರರು ಗುಂಡಿನ ದಾಳಿ ನಡೆಸುತ್ತಲೇ ಗಡಿ ಭದ್ರತಾ ಪಡೆ ಯೋಧರು ಘಟನಾ ಸ್ಥಳಕ್ಕೆ ತೆರಳಿದ್ದು ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಸಚಿವರ ಮನೆ ಮೇಲೆ ದಾಳಿ ನಡೆಸಿದ ಉಗ್ರರ ವಿರುದ್ಧ ಬಿಎಸ್ಎಫ್ ಯೋಧರು ಗುಂಡಿನ ದಾಳಿ ನಡೆಸುತ್ತಿದ್ದಾರೆ.