ದೇಶ

ಜಮ್ಮು-ಕಾಶ್ಮೀರ: ಭಾರೀ ಪ್ರಮಾಣದ ಶಸ್ತ್ರಾಸ್ತ್ರ, ಸ್ಫೋಟಕ ವಸ್ತುಗಳು ವಶಕ್ಕೆ

Manjula VN

ಜಮ್ಮು: ಉಗ್ರರ ಅಡಗುತಾಣಗಳ ಮೇಲೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭರ್ಜರಿ ಕಾರ್ಯಾಚರಣೆಯನ್ನು ಮಾಡಿದ್ದು, ಕಾರ್ಯಾಚರಣೆ ವೇಳೆ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.

ರಜೌರಿ ಜಿಲ್ಲೆಯಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ನಡೆಸುತ್ತಿರುವ ಮಾಹಿತಿ ತಿಳಿದ ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಿನ್ನೆ ಕಾರ್ಯಾಚರಣೆಗಿಳಿದಿದ್ದರು. ಈ ವೇಳೆ 21 ಕೆಜಿಯ ಐಇಡಿ, 5 ಕೆಜಿ ಸ್ಫೋಟಕ ಪುಡಿ, 1 ಎಕೆ-56 ಬಂದೂಕು, ಎರಡು ನಿಯತಕಾಲಿಕೆಗಳು, ಎಕೆ-47 ಬಂದೂಕಿನ 97 ಸುತ್ತಿನ ಗುಂಡುಗಳು, 3 ಬ್ಯಾಟರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ಹೇಳಲಾಗುತ್ತಿದೆ.

ರಜೌರಿ ಜಿಲ್ಲೆಯ ಭುದಾಲ್ ಪ್ರದೇಶದಲ್ಲಿ ಸೇನೆ ಹಾಗೂ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು. ಕಾರ್ಯಾಚರಣೆ ವೇಳೆ ದೊಡ್ಡ ಮಟ್ಟದಲ್ಲಿ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಭುದಾಲ್'ನ ಎಸ್'ಹೆಚ್ ಒ ಅಧಿಕಾರಿ ಅಜಯ್ ಸಿಂಗ್ ಛಿಬ್ ಅವರು ಹೇಳಿದ್ದಾರೆ.

SCROLL FOR NEXT