ಮುಜಾಫರನಗರ: ಆಪ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಆಕ್ಷೇಪಾರ್ಹ ಚಿತ್ರ ಹಂಚುತ್ತಿದ್ದ ವ್ಯಕ್ತಿಯ ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ವ್ಯಕ್ತಿಯೊಬ್ಬ ವಾಟ್ಸ ಆಪ್ ನಲ್ಲಿ ಪ್ರಧಾನಿ ಮೋದಿಯವರ ಆಕ್ಷೇಪಾರ್ಹ ಚಿತ್ರ ಪೋಸ್ಟ್ ಮಾಡಿರುವುದಾಗಿ ಬಿಜೆಪಿ ಕಾರ್ಯಕರ್ತರೊಬ್ಬರು ದೂರು ನೀಡಿದ್ದು, ದೂರು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಠಾಣಾ ಅಧಿಕಾರಿ ಡಿ.ಕೆ.ತಿವಾರಿ ಅವರು ಹೇಳಿದ್ದಾರೆ.
ಆಕ್ಷೇಪಾರ್ಹ ಚಿತ್ರದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅವರು ತಿವಾರಿ ಅವರು ತಿಳಿಸಿದ್ದಾರೆ.