ಮುಲಾಯಂ ಸಿಂಗ್ ಯಾದವ್ 
ದೇಶ

ನಮ್ಮ ಕುಟುಂಬ ಒಂದಾಗಿದೆ, ಪಕ್ಷದಲ್ಲಿ ಒಗ್ಗಟ್ಟಿದೆ: ಮುಲಾಯಂ ಸಿಂಗ್

ನಮ್ಮ ಕುಟುಂಬ ಮತ್ತು ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಮ್ಮದು ಒಂದೇ ಪರಿವಾರ, ಒಂದೇ ಪಕ್ಷ ಎಂದು ಉತ್ತರ ಪ್ರದೇಶ ಆಡಳಿತರೂಢ...

ಲಖನೌ: ನಮ್ಮ ಕುಟುಂಬ ಮತ್ತು ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಮ್ಮದು ಒಂದೇ ಪರಿವಾರ, ಒಂದೇ ಪಕ್ಷ ಎಂದು ಉತ್ತರ ಪ್ರದೇಶ ಆಡಳಿತರೂಢ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರು ಮಂಗಳವಾರ ಹೇಳಿದ್ದಾರೆ.
ತಮ್ಮ ಪುತ್ರ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಸಂಪುಟದಿಂದ ವಜಾಗೊಂಡಿರುವ ಸಹೋದರ ಶಿವಪಾಲ್ ಸಿಂಗ್ ಯಾದವ್ ಅವರ ಬಿಕ್ಕಟ್ಟಿನ ಬಗ್ಗೆ ಸುದೀರ್ಘ ತ್ರಿಕೋನ ಮಾತುಕತೆ ನಡೆಸಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಲಾಯಂ. ನಾವು ಸಂಪೂರ್ಣ ಒಗ್ಗಟ್ಟಿನಿಂದ ಇದ್ದೇವೆ. ನಮ್ಮ ಸಾಮರ್ಥ್ಯಕ್ಕೆ ಯಾವುದೇ ಧಕ್ಕೆಯಾಗಿಲ್ಲ ಎಂದರು.
2012ರಲ್ಲಿ ನನ್ನ ಹೆಸರಿನಲ್ಲಿ ಬಹುಮತ ಬಂತು. ನಾವು ಅಖಿಲೇಶ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದೆವು. ಈಗ ಜವಾಬ್ದಾರಿಗಳನ್ನು ನಿಭಾಯಿಸಬೇಕಾದದ್ದು ಅವರ ಕೆಲಸ ಎಂದು ಹೇಳುವ ಮೂಲಕ ಉತ್ತರ ಪ್ರದೇಶ ಮುಖ್ಯಮಂತ್ರಿ ಸ್ಥಾನದಲ್ಲಿ ಬದಲಾವಣೆ ಇಲ್ಲ ಎಂಬುದನ್ನು ಮುಲಾಯಂ ಸ್ಪಷ್ಟಪಡಿಸಿದರು.
ಅಮರ ಸಿಂಗ್ ಅವರ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಮುಲಾಯಂ, ಎಲ್ಲದಕ್ಕೂ ಅಮರಸಿಂಗ್ ಅವರನ್ನು ಏಕೆ ಎಳೆದು ತರುತ್ತೀರಿ? ಎಂದು ಮರುಪ್ರಶ್ನೆ ಹಾಕಿದರು. ಇನ್ನು 2017ರ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ ಮುಲಾಯಂ, ನಮಗೆ ಬಹುಮತ ಬರಲಿ. ಆ ಬಳಿಕ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬುದು ನಿಮಗೆ ಗೊತ್ತಾಗುತ್ತದೆ ಎಂದರು.
ಶಿವಪಾಲ್ ಯಾದವ್ ಸೇರಿದಂತೆ ಸಂಪುಟದಿಂದ ವಜಾಗೊಂಡಿರುವ ಸಚಿವರನ್ನು ಸಂಪುಟಕ್ಕೆ ಮರು ಸೇರ್ಪಡೆ ಮಾಡಿಕೊಳ್ಳುವುದು ಮುಖ್ಯಮಂತ್ರಿಗೆ ಬಿಟ್ಟ ವಿಚಾರ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ