ನವದೆಹಲಿ: ಉತ್ತರ ದೆಹಲಿಯ ನಯಾ ಬಜಾರ್ ನಲ್ಲಿ ಸ್ಫೋಟ ನಡೆದಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ದೆಹಲಿಯ ಪೊಲೀಸ್ ಆಯುಕ್ತ ಅಲೋಕ್ ವರ್ಮಾ ಅವರೊಂದಿಗೆ ಮಾತನಾಡಿದ್ದಾರೆ.
ಬಹ್ರೇನ್ ನಲ್ಲಿರುವ ಗೃಹ ಸಚಿವ ರಾಜನಾಥ್ ಸಿಂಗ್, ದೆಹಲಿ ಪೊಲೀಸ್ ಆಯುಕ್ತರಿಗೆ ಕರೆ ಮಾಡಿ ಪರಿಸ್ಥಿತಿಯ ಬಗ್ಗೆ ವಿವರಣೆ ಪಡೆದಿದ್ದಾರೆ. ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಹಾಗು ಪರಿಸ್ಥಿತಿಯ ಬಗ್ಗೆ ದೆಹಲಿ ಪೊಲೀಸ್ ಆಯುಕ್ತ ಅಲೋಕ್ ವರ್ಮಾ ಗೃಹ ಸಚಿವರಿಗೆ ವಿವರಣೆ ನೀಡಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಶಾಂತಿ ಕಾಪಾಡಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ದೆಹಲಿ ಪೊಲೀಸ್ ಆಯುಕ್ತರಿಗೆ ರಾಜನಾಥ್ ಸಿಂಗ್ ಸೂಚನೆ ನೀಡಿದ್ದಾರೆ. ಬೆಳಗ್ಗೆ ದೆಹಲಿಯ ಚಾಂದಿನಿಚೌಕ್ ಬಳಿಯ ನಯಾ ಬಜಾರ್ ಮಾರುಕಟ್ಟೆ ಪ್ರದೇಶದಲ್ಲಿ ಸ್ಫೋಟ ನಡೆದಿದ್ದು ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ.