ಲಖನೌ: ಉತ್ತರ ಪ್ರದೇಶದಲ್ಲಿ ಬಿಎಸ್ ಪಿ- ಎಸ್ ಪಿ ಮೈತ್ರಿ ಮಾಡಿಕೊಂಡಿವೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ತಳ್ಳಿಹಾಕಿರುವ ಬಿಎಸ್ ಪಿ ನಾಯಕಿ ಮಾಯಾವತಿ, ಬಿಜೆಪಿ ನಾಯಕರು ಉತ್ತರ ಪ್ರದೇಶದ ಜನತೆಯನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಚುನಾವಣೆಯ ದಿನಾಂಕ ಇನ್ನು ನಿರ್ಧಾರವಾಗಿಲ್ಲ. ಆಗಲೇ ಬಿಜೆಪಿ ರಾಜ್ಯದ ಜನತೆಯನ್ನು ದಾರಿ ತಪ್ಪಿಸುತ್ತಿದ್ದು, ತಪ್ಪು ಮಾಹಿತಿ ನೀಡುತ್ತಿದೆ ಎಂದು ಮಾಯಾವತಿ ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಬಗ್ಗೆ ಒಳ್ಳೆಯ ಅಭಿಪ್ರಾಯವಿಲ್ಲ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಎಸ್ ಪಿ ಎಸ್ ಪಿ ಮೈತ್ರಿ ಮಾಡಿಕೊಂಡಿವೆ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ರಾಜಕೀಯ ದುರುದ್ದೇಶದಿಂದ ಕೂಡಿದೆ. ಜನರ ಗಮನವನ್ನು ತಮ್ಮ ವೈಫಲ್ಯಗಳಿಂದ ಬೇರೆಡೆಗೆ ಸೆಳೆಯಲು ಈ ರೀತಿಯ ಹೇಳಿಕೆ ನೀಡಿದ್ದಾರೆ ಎಂದು ಮಾಯಾವತಿ ಹೇಳಿದ್ದಾರೆ. ಅ.23 ರಂದು (ಭಾನುವಾರ) ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಎಸ್ ಪಿ ಹಾಗು ಬಿಎಸ್ ಪಿ ಒಳಒಪ್ಪಂದ ಮಾಡಿಕೊಂಡಿದ್ದು, ಭ್ರಷ್ಟಾಚಾರವನ್ನು ಪರಸ್ಪರ ಬೆಂಬಲಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.