ದೇಶ

ಭಾರತದ ಎನ್ಎಸ್ ಜಿ ಸದಸ್ಯತ್ವಕ್ಕೆ ನ್ಯೂಜಿಲಾಂಡ್ ಪ್ರಧಾನಿಯಿಂದ ಬೆಂಬಲ

Srinivas Rao BV

ನವದೆಹಲಿ: ಭಾರತದ ವಿಶ್ವಸಂಸ್ಥೆಯ ಪರಮಾಣು ಪೂರೈಕೆದಾರ ಸಮೂಹ (ಎನ್ಎಸ್ ಜಿ) ಸದಸ್ಯತ್ವಕ್ಕೆ ನ್ಯೂಜಿಲ್ಯಾಂಡ್ ಬೆಂಬಲ ವ್ಯಕ್ತಪಡಿಸಿದ್ದು, ಭಾರತದ ಸೇರ್ಪಡೆಗೆ ಪ್ರಮುಖವಾದದ್ದು ಎಂದು ನ್ಯೂಜಿಲ್ಯಾಂಡ್ ಪ್ರಧಾನಿ ಹೇಳಿದ್ದಾರೆ.

ಭಾರತಕ್ಕೆ ಭೇಟಿ ನೀಡಿರುವ ನ್ಯೂಜಿಲ್ಯಾಂಡ್ ಪ್ರಧಾನಿ ಜಾನ್ ಕೀ, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಬಳಿಕ ಜಂಟಿ ಹೇಳಿಕೆ ನೀಡಿರುವ ನ್ಯೂಜಿಲ್ಯಾಂಡ್ ಪ್ರಧಾನಿ, ಭಾರತದ ಎನ್ಎಸ್ ಜಿ ಸದಸ್ಯತ್ವ ಹಾಗು ವಿಶ್ವಸಂಸ್ಥೆಯಲ್ಲಿ ಭದ್ರತಾ ಮಂಡಳಿ ಸದಸ್ಯತ್ವಕ್ಕೆ ನ್ಯೂಜಿಲ್ಯಾಂಡ್ ಬೆಂಬಲ ಮುಂದುವರೆಸಲಿದೆ ಎಂದು ಹೇಳಿದ್ದಾರೆ. ದ್ವಿಪಕ್ಷೀಯ ಮಾತುಕತೆಯಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಎನ್ಎಸ್ ಜಿ ಸದಸ್ಯತ್ವ ಹಾಗು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸದಸ್ಯತ್ವದ ಬಗ್ಗೆ ಚರ್ಚಿಸಲಾಯಿತು. ಭಾರತದ ಸದಸ್ಯತ್ವ ಪ್ರಮುಖವಾಗಿದ್ದು, ಶೀಘ್ರವೇ  ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಗೆ ನ್ಯೂಜಿಲ್ಯಾಂಡ್ ಸಹಾಯ ಮಾಡಲಿದೆ ಎಂದು ನ್ಯೂಜಿಲ್ಯಾಂಡ್ ಪ್ರಧಾನಿ ಭರವಸೆ ನೀಡಿದ್ದಾರೆ.

SCROLL FOR NEXT