ದೇಶ

ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಉಡುಗೊರೆ, ಶೇ.2ರಷ್ಟು ತುಟ್ಟಿಭತ್ಯೆ ಹೆಚ್ಚಳ

Lingaraj Badiger

ನವದೆಹಲಿ: ಕೇಂದ್ರ ಸರ್ಕಾರ ತನ್ನ ನೌಕರರಿಗೆ ಮತ್ತು ಪಿಂಚಣಿದಾರರರಿಗೆ ದೀಪಾವಳಿ ಉಡುಗೊರೆಯಾಗಿ ಶೇ.2ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡುವ ಮೂಲಕ ಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದೆ.

ಇಂದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.2ರಷ್ಟು ಹೆಚ್ಚಳ ಮಾಡುವ ಪ್ರಸ್ತಾವಕ್ಕೆ ಒಪ್ಪಿಗೆ ನೀಡಿದೆ.

ದೇಶದಲ್ಲಿ ಸರಿಸುಮಾರು 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 58 ಲಕ್ಷದಷ್ಟು ಪಿಂಚಣಿದಾರರು ಇದರ ಲಾಭ ಪಡೆಯಲಿದ್ದಾರೆ.

ಇತ್ತೀಚಿಗಷ್ಟೇ ಕೇಂದ್ರ ಸರ್ಕಾರ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸಿತ್ತು.

SCROLL FOR NEXT