ಸಂಗ್ರಹ ಚಿತ್ರ 
ದೇಶ

ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್ ಸೇನೆ: ಶೆಲ್ ದಾಳಿಗೆ 6 ಜನರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಆರ್.ಎಸ್. ಪುರ ಮತ್ತು ಅರ್ನಿಯಾ ಸೆಕ್ಟರ್ ಬಳಿ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮವನ್ನು ಉಲ್ಲಂಘಿಸಿದ್ದು, ಅಪ್ರಚೋದಿತ ಗುಂಡಿನ ದಾಳಿ ಹಾಗೂ ಶೆಲ್ ದಾಳಿಗೆ 6 ಮಂದಿಗೆ...

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಆರ್.ಎಸ್. ಪುರ ಮತ್ತು ಅರ್ನಿಯಾ ಸೆಕ್ಟರ್ ಬಳಿ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮವನ್ನು ಉಲ್ಲಂಘಿಸಿದ್ದು, ಅಪ್ರಚೋದಿತ ಗುಂಡಿನ ದಾಳಿ ಹಾಗೂ ಶೆಲ್ ದಾಳಿಗೆ 6 ಮಂದಿಗೆ ಗಾಯವಾಗಿರುವ ಘಟನೆ ಗುರುವಾರ ನಡೆದಿದೆ.

ಕಳೆದ ರಾತ್ರಿಯಿಂದಲೂ ಗಡಿಯಲ್ಲಿ ಪಾಕಿಸ್ತಾನ ಸೇನೆ ತನ್ನ ಪುಂಡಾಟವನ್ನು ಮುಂದುವರೆಸುತ್ತಲೇ ಇದ್ದು, ಭಾರತೀಯ ಸೇನೆಯ ಮೇಲೆ ಅಪ್ರಚೋದಿತ ಗುಂಡಿನ ದಾಳಿಯನ್ನು ನಡೆಸುತ್ತಿದೆ. ದಾಳಿ ಪರಿಮಾಮ ಗಡಿಯಲ್ಲಿನ ಬಿಎಸ್ಎಫ್ ಯೋಧರ 12 ಕೇಂದ್ರಗಳು ನಾಶಗೊಂಡಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಹೀರಾನಗರ ಸೆಕ್ಟರ್ ನ ಬೊಬಿಯಾ ಪ್ರದೇಶದಲ್ಲಿ ಉಗ್ರರು ಗಡಿ ನುಸುಳಲು ಯತ್ನಿಸಿದ್ದು, ಸೇನೆ ಮೇಲೆ ಶೆಲ್ ಗಳ ದಾಳಿಯನ್ನು ನಡೆಸಿದ್ದಾರೆ. ದಾಳಿಗೆ ಪ್ರತ್ಯುತ್ತರ ನೀಡುವ ಮೂಲಕ ಭಾರತೀಯ ಸೇನೆ ಉಗ್ರರ ಒಳನುಸುಳುವ ಪ್ರಯತ್ನವನ್ನು ವಿಫಲಗೊಳ್ಳುವಂತೆ ಮಾಡಿದ್ದಾರೆ.

ಸೀಮಿತ ದಾಳಿ ನಂತರ ಗಡಿಯಲ್ಲಿ ಉದ್ನಿಗ್ನ ವಾತಾವರಣ ಮುಂದುವರೆದಿದ್ದು. ಅ.19-20 ರಂದು ಕೂಡ ಗಡಿಯಲ್ಲಿರುವ ಜನರು ಮನಸ್ಸಿಗೆ ಇಷ್ಟವಿಲ್ಲದಿದ್ದರೂ ಸ್ಥಳಾಂತರಗೊಂಡಿದ್ದರು. ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳು ಇದೀಗ ಗಡಿಯಲ್ಲಿರುವ ಶಾಲೆಗಳನ್ನು ಮುಚ್ಚುವಂತೆ ಆದೇಶ ಹೊರಡಿಸಿದ್ದಾರೆ. ಅಲ್ಲದೆ. ದಾಳಿಯಾಗುವ ಸಮಯದಲ್ಲಿ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆಯೂ ಜನರಿಗೆ ಸೂಚನೆ ನೀಡಿದ್ದಾರೆ.

ಗಡಿಯಲ್ಲಿ ಮುಂದುವರೆದ ಉದ್ನಿಗ್ನ ವಾತಾವರಣ ಇದೀಗ ಅಲ್ಲಿನ ರೈತರು ಕಂಗಾಲಾಗುವಂತೆ ಮಾಡಿದೆ. ದಾಳಿಯಿಂದಾಗಿ ಸಾರ್ವಜನಿಕರ ಹಲವಾರು ಆಸ್ತಿಪಾಸ್ತಿಗಳು ನಾಶಗೊಳ್ಳುವಂತಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!