ನವದೆಹಲಿ: ತುರ್ತು ಸಂದರ್ಭದಲ್ಲಿ ತ್ವರಿತ ಸಹಾಯಕ್ಕೆ ಅನುಕೂಲವಾಗುವಂತೆ ಎಲ್ಲಾ ರೀತಿಯ ಸ್ಮಾರ್ಟ್ ಮತ್ತು ಮೊಬೈಲ್ ಫೋನ್ ಗಳಲ್ಲಿ 2017ರ ಜನವರಿ 1ರಿಂದ ಪ್ಯಾನಿಕ್ ಬಟನ್ ಕಡ್ಡಾಯವಾಗಿರಲಿದೆ ಎಂದು ಪೊಲೀಸರು ದೆಹಲಿ ಹೈಕೋರ್ಟ್ ಗೆ ತಿಳಿಸಿದ್ದಾರೆ.
ಪ್ರಮುಖವಾಗಿ ಮಹಿಳೆಯ ಹಿತದೃಷ್ಠಿಯಿಂದ ಎಲ್ಲಾ ಸ್ಮಾರ್ಟ್ ಫೋನ್ ಗಳಲ್ಲಿ ಪ್ಯಾನಿಕ್ ಬಟನ್ ಹೊಂದಲಿವೆ. ತುರ್ತು ಸಹಾಯಕ ನಂಬರ್ ಗಳಾದ 100, 101, 102, ಮತ್ತು 108 ಜತೆಗೆ 112 ಸಿಂಗಲ್ ನಂಬರ್ ಅನ್ನು ಅಳವಡಿಸಲಾಗುವುದು ಎಂದು ದೆಹಲಿ ಪೊಲೀಸರು ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಗಳಾದ ಬಿ.ಡಿ ಅಹ್ಮದ್, ಮತ್ತು ಅಶುತೋಷ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠಕ್ಕೆ ಮಾಹಿತಿ ನೀಡಿದರು.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿನಿತ್ಯ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ತಡೆಯಲು ಮೊಬೈಲ್ ಫೋನ್ ಗಳಲ್ಲಿ ಪ್ಯಾನಿಕ್ ಬಟನ್ ಅನ್ನು ಕಡ್ಡಾಯವಾಗಿ ಅಳವಡಿಕೆ ಮಾಡಬೇಕು ಎಂದು ಮಕ್ಕಳ ಮತ್ತು ಮಹಿಳಾ ಅಭಿವೃದ್ಧಿ ಸಚಿವೆ ಮೇನಕಾ ಗಾಂಧಿ ರಾಜ್ಯಸಭೆಯಲ್ಲಿ ಹೇಳಿದ್ದರು.