ಭಾರತೀಯ ಸೇನೆ ಕೇಂದ್ರ ಸರ್ಕಾರಕ್ಕೆ ಉತ್ತರದಾಯಿ: ಸುಪ್ರೀಂ ಕೋರ್ಟ್
ಭಾರತೀಯ ಸೇನೆ ಕೇಂದ್ರ ಸಚಿವ ಸಂಪುಟ ಹಾಗೂ ಕೇಂದ್ರ ಸರ್ಕಾರಕ್ಕೆ ಉತ್ತರದಾಯಿ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.
ನವದೆಹಲಿ: ಭಾರತೀಯ ಸೇನೆ ಕೇಂದ್ರ ಸಚಿವ ಸಂಪುಟ ಹಾಗೂ ಕೇಂದ್ರ ಸರ್ಕಾರಕ್ಕೆ ಉತ್ತರದಾಯಿ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.
ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನಡೆಸಿದ ಸೇನಾ ಕಾರ್ಯಾಚರಣೆಯನ್ನು ರಾಜಕೀಯ ಕಾರಣಗಳಿಗಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಸೇನಾ ಕಾರ್ಯಾಚರಣೆ ನಿರ್ಧಾರಗಳಲ್ಲಿ ಸರ್ಕಾರ ಹಸ್ತಕ್ಷೇಪ ಮಾಡದಂತೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿತ್ತು.
ಸೇನೆ ರಾಷ್ಟ್ರಪತಿಗಳಿಗೆ ಮಾತ್ರ ಉತ್ತರದಾಯಿ, ಸರ್ಕಾರ ಸೇನಾ ನಿರ್ಧಾರಗಳಲ್ಲಿ ಹಸ್ತಕ್ಷೇಪ ಮಾಡಬಾರದು ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಅಂಶವನ್ನು ತಳ್ಳಿಹಾಕಿರುವ ಸುಪ್ರೀಂ ಕೋರ್ಟ್ ಸುಪ್ರೀಂ ಕೋರ್ಟ್, ಸೇನೆ ಸರ್ಕಾರಕ್ಕೆ ಉತ್ತರದಾಯಿ, ಹಾಗಿಲ್ಲದೆ ಇದ್ದರೆ ಅದು ಸೇನಾಡಳಿತವಾಗುತ್ತದೆ ಎಂದು ಹೇಳಿದೆ. ಬಿಜೆಪಿ ವಿರುದ್ಧ ಭಾರತೀಯ ಸೇನೆ ಸೆ.29 ರಂದು ನಡೆಸಿದ್ದ ಸೀಮಿತ ದಾಳಿಯನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವ ಆರೋಪ ಕೇಳಿಬಂದಿತ್ತು.