ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಶ್ರೀನಗರ: ಭಾರತೀಯ ಯೋಧನನ್ನು ಕೊಂದು ದೇಹ ತುಂಡರಿಸಿದ ಉಗ್ರರು

ಭಾರತೀಯ ಯೋಧನನ್ನು ಗುಂಡಿಟ್ಟು ಹತ್ಯೆ ಮಾಡಿರುವ ಉಗ್ರರು ಆತನ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಅಟ್ಟಹಾಸ ಮೆರೆದಿರುವ ದುಷ್ಕೃತ್ಯ ಜಮ್ಮು

ಸಾಂದರ್ಭಿಕ ಚಿತ್ರ
Shilpa D
Updated On : 29 Oct 2016, 11:43 am

ಶ್ರೀನಗರ: ಭಾರತೀಯ ಯೋಧನನ್ನು ಗುಂಡಿಟ್ಟು ಹತ್ಯೆ ಮಾಡಿರುವ ಉಗ್ರರು ಆತನ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಅಟ್ಟಹಾಸ ಮೆರೆದಿರುವ ದುಷ್ಕೃತ್ಯ ಜಮ್ಮು ಕಾಶ್ಮೀರದ ಕುಪ್ವಾರದಲ್ಲಿ ನಡೆದಿದೆ.

ಕುಪ್ವಾರಾ ವಲಯದಲ್ಲಿ ಗಡಿ ನಿಯಂತ್ರಣ ರೇಖೆ ಒಳನುಗ್ಗಿದ ಉಗ್ರರು ಭಾರತೀಯ ಯೋಧನನ್ನು ಕೊಂದಿದ್ದಾರೆ. ಯೋಧನ ಕತ್ತರಿಸಿದ ಶರೀರ ಮಚಿಲ್ ವಲಯದಲ್ಲಿ ಪತ್ತೆಯಾಗಿದೆ. ಭಾರತೀಯ ಸೇನೆ ನಡೆಸಿದ ಗುಂಡಿನ ದಾಳಿಗೆ ಓರ್ವ ಉಗ್ರ ಬಲಿಯಾಗಿದ್ದಾನೆ ಎಂದು ಸೇನಾ ಮೂಲಗಳು ತಿಳಿಸಿವೆ.

ಗಡಿ ನಿಯಂತ್ರಣ ರೇಖೆ ಬಳಿ ಈ ಕೃತ್ಯ ನಡೆದಿದ್ದು, ಉಗ್ರರು ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಪ್ರದೇಶಕ್ಕೆ ನುಗ್ಗುವ ಮುನ್ನ ಯೋಧನ ದೇಹವನ್ನು ಛಿದ್ರಗೊಳಿಸಿದ್ದಾರೆ. ಪಾಕಿಸ್ತಾನ ಸೇನೆ ಗುಂಡಿನ ದಾಳಿ ನಡೆಸುವ ಮೂಲಕ ಉಗ್ರರು ಪರಾರಿಯಾಗಲು ಸಹಾಯ ಮಾಡಿದೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments