ಸಂಗ್ರಹ ಚಿತ್ರ 
ದೇಶ

ಬೇಹುಗಾರಿಕೆ ವಿವಾದ: ಪಾಕ್' ತೊರೆದ ಭಾರತೀಯ ರಾಯಭಾರಿ ಸುರ್ಜಿತ್ ಸಿಂಗ್

ಪಾಕಿಸ್ತಾನದ ಸೇಡಿಗೆ ಗುರಿಯಾಗಿ ಬೇಹುಗಾರಿಕೆ ಆರೋಪ ಹೊತ್ತಿದ್ದ ಭಾರತೀಯ ರಾಯಭಾರಿ ಸುರ್ಜಿತ್ ಸಿಂಗ್ ಅವರು ಶನಿವಾರ ಪಾಕಿಸ್ತಾನವನ್ನು ತೊರೆದಿದ್ದಾರೆಂದು ಭಾನುವಾರ ಮೂಲಗಳಿಂದ...

ಇಸ್ಲಾಮಾಬಾದ್: ಪಾಕಿಸ್ತಾನದ ಸೇಡಿಗೆ ಗುರಿಯಾಗಿ ಬೇಹುಗಾರಿಕೆ ಆರೋಪ ಹೊತ್ತಿದ್ದ ಭಾರತೀಯ ರಾಯಭಾರಿ ಸುರ್ಜಿತ್ ಸಿಂಗ್ ಅವರು ಶನಿವಾರ ಪಾಕಿಸ್ತಾನವನ್ನು ತೊರೆದಿದ್ದಾರೆಂದು ಭಾನುವಾರ ಮೂಲಗಳಿಂದ ತಿಳಿದುಬಂದಿದೆ.

ರಕ್ಷಣಾ ಇಲಾಖೆಯ ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡುತ್ತಿದ್ದಾರೆಂದು ಹೇಳಿ ಕೆಲ ದಿನಗಳ ಹಿಂದಷ್ಟೇ ದೆಹಲಿ ಪೊಲೀಸರು ಪಾಕಿಸ್ತಾನ ರಾಯಭಾರಿ ಕಚೇರಿಯ ಅಧಿಕಾರಿಗಳನ್ನು ಬಂಧನಕ್ಕೊಳಪಡಿಸಿ ವಿಚಾರಣೆ ನಡೆಸಿತ್ತು. ಅಲ್ಲದೆ, ಗೂಡಾಚಾರ ನಡೆಸುತ್ತಿರುವ ಪಾಕಿಸ್ತಾನ ಅಧಿಕಾರಿಗಳು 48 ಗಂಟೆಯೊಳಗಾಗಿ ಭಾರತ ತೊರೆಯುವಂತೆ ಸೂಚನೆ ನೀಡಿತ್ತು.

ಇದರ ಬೆನ್ನಲ್ಲೇ ಭಾರತದ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದ ಪಾಕಿಸ್ತಾನ, ಏಟಿಗೆ ಏದುರೇಟು ಎಂಬಂತೆ ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಅಧಿಕಾರಿಗೆ ನೋಟಿಸ್ ವೊಂದನ್ನು ಜಾರಿ ಮಾಡಿತ್ತು. ಸುರ್ಜಿತ್ ಸಿಂಗ್ ಅವರು ಪಾಕಿಸ್ತಾನದಲ್ಲಿ ಬೇಹುಗಾರಿಕೆ ಮಾಡುತ್ತಿದ್ದಾರೆಂದು ಆರೋಪಿಸಿತ್ತು.

ಅಲ್ಲದೆ, ಭಾರತ 1961ರ ವಿಯೆನ್ನಾ ಒಪ್ಪಂದವನ್ನು ಉಲ್ಲಂಘನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಕೂಡಲೇ ಭಾರತೀಯ ರಾಯಭಾರಿಗಳು 48 ಗಂಟೆಯೊಳಗಾಗಿ ಪಾಕಿಸ್ತಾನ ತೊರೆಯುವಂತೆ ತಿಳಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾನು ಭ್ರಷ್ಟನಲ್ಲ': ಕೋರ್ಟ್ ತೀರ್ಪಿನ ಬಳಿಕ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ ಅರವಿಂದ್ ಕೇಜ್ರಿವಾಲ್-Video

Delhi excise policy case: ಅರವಿಂದ್ ಕೇಜ್ರಿವಾಲ್-ಮನೀಶ್ ಸಿಸೋಡಿಯಾ ವಿರುದ್ಧ ಕೇಸು ಖುಲಾಸೆ-Video

ಹೈಕಮಾಂಡ್‌ ಮೌನ ವಹಿಸಿದಷ್ಟು ಹಾನಿ ಅಧಿಕ (ನೇರ ನೋಟ)

ಕಾಂಗ್ರೆಸ್ ನಲ್ಲಿ ಕುರ್ಚಿ ಕದನ: ಹುಟ್ಟುಹಬ್ಬ ನೆಪದಲ್ಲಿ ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ

ತಮಿಳನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಜಯಲಲಿತಾ ನೆಚ್ಚಿನ ಶಿಷ್ಯ- ಮಾಜಿ ಸಿಎಂ ಪನ್ನೀರ್‌ಸೆಲ್ವಂ DMK ಸೇರ್ಪಡೆ

SCROLL FOR NEXT