ಯೋಧರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ನರೇಂದ್ರ ಮೋದಿ 
ದೇಶ

ಒಆರ್ ಒಪಿ ಭರವಸೆ ಈಡೇರಿಸಿದ್ದೇವೆ, ಹಿಂದಿನ ಸರ್ಕಾರಕ್ಕೆ ಒಆರ್ ಒಪಿ ಬಗ್ಗೆ ಅರಿವೇ ಇರಲಿಲ್ಲ: ಮೋದಿ

ಯೋಧರೊಂದಿಗೆ ದೀಪಾವಳಿ ಹಬ್ಬವನ್ನು ಆಚರಿಸಿರುವ ಪ್ರಧಾನಿ ನರೇಂದ್ರ ಮೋದಿ ಒಆರ್ ಒಪಿ ಬಗ್ಗೆ ಮಾತನಾಡಿದ್ದು, ಕೇಂದ್ರ ಸರ್ಕಾರ ಈಗಾಗಲೇ 5,500 ಕೋಟಿಯಷ್ಟು ಮೊತ್ತದ ಒನ್ ರ್ಯಾಂಕ್ ಒನ್ ಪೆನ್ಷನ್ ನ ಮೊದಲ ಕಂತನ್ನು ಪಾವತಿ ಮಾಡಿದೆ ಎಂದು ಹೇಳಿದ್ದಾರೆ.

ನವದೆಹಲಿ: ಯೋಧರೊಂದಿಗೆ ದೀಪಾವಳಿ ಹಬ್ಬವನ್ನು ಆಚರಿಸಿರುವ ಪ್ರಧಾನಿ ನರೇಂದ್ರ ಮೋದಿ ಒಆರ್ ಒಪಿ ಬಗ್ಗೆ ಮಾತನಾಡಿದ್ದು, ಕೇಂದ್ರ ಸರ್ಕಾರ ಈಗಾಗಲೇ 5,500 ಕೋಟಿಯಷ್ಟು ಮೊತ್ತದ ಒನ್ ರ್ಯಾಂಕ್ ಒನ್ ಪೆನ್ಷನ್ ನ ಮೊದಲ ಕಂತನ್ನು ಪಾವತಿ ಮಾಡಿದೆ ಎಂದು ಹೇಳಿದ್ದಾರೆ.

"ನಾನು ಪ್ರಧಾನಿ ಅಭ್ಯರ್ಥಿಯಾಗಿ ಆಯ್ಕೆಗೊಂಡಿದ್ದಾಗ ಒನ್ ರ್ಯಾಂಕ್ ಒನ್ ಪೆನ್ಷನ್ ನ್ನು ಜಾರಿ ಮಾಡುವ ಭರವಸೆ ನೀಡಿದ್ದೆ. ಆದರೆ ಅಂದು ಅಧಿಕಾರದಲ್ಲಿದ್ದವರಿಗೆ ಒನ್ ರ್ಯಾಂಕ್ ಒನ್ ಪೆನ್ಷನ್ ಏನು ಎಂಬುದೇ ತಿಳಿದಿರಲಿಲ್ಲ ಎಂದು ಮೋದಿ ಹೇಳಿದ್ದಾರೆ.    

ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಒಆರ್ ಒಪಿಯನ್ನು ಜಾರಿಗೊಳಿಸಲು ನಿರ್ಧರಿಸಿದೆ. ಆದರೆ ಕೇಂದ್ರ ಸರ್ಕಾರಕ್ಕೆ ಒಆರ್ ಒಪಿಯ ಮೊತ್ತವನ್ನು ಒಂದೇ ಬಾರಿಗೆ ಪಾವತಿ ಮಾಡಲು ಸಾಧ್ಯವಾಗಲಿಲ್ಲ. ಆದ್ದರಿಂದ ನಿವೃತ್ತ ಯೋಧರಿಗೆ ನಾಲ್ಕು ಕಂತುಗಳಲ್ಲಿ ಒ ಆರ್ ಒಪಿಯನ್ನು ಸ್ವೀಕರಿಸುವಂತೆ ಮನವಿ ಮಾಡಿದೆ, ಈ ಪೈಕಿ ಈಗಾಗಲೇ ಮೊದಲನೇ ಕಂತನ್ನು ಪಾವತಿ ಮಾಡಲಾಗಿದೆ ಎಂದು ಮೋದಿ ಹೇಳಿದ್ದಾರೆ.

40 ವರ್ಷಗಳಿಂದ ಒನ್ ರ್ಯಾಂಕ್ ಒನ್ ಪೆನ್ಷನ್ ಯೋಜನೆ ನೆನೆಗುದಿಗೆ ಬಿದ್ದಿತ್ತು. ಆದ್ದರಿಂದ ಇದಕ್ಕೆ ಕೇವಲ 500 ಕೋಟಿ ರೂ ಹಣವನ್ನು ಮೀಸಲಿರಿಸಲಾಗಿತ್ತು ಎಂದು ಮೋದಿ ತಿಳಿಸಿದ್ದಾರೆ. ಪ್ರಧಾನಿಯಾದ ಮೊದಲ ವರ್ಷ ನರೇಂದ್ರ ಮೋದಿ ಅವರು ದೀಪಾವಳಿಯನ್ನು ಸಿಯಾಚಿನ್ ನಲ್ಲಿ ಯೋಧರೊಂದಿಗೆ ಆಚರಿಸಿದ್ದರು. ನಂತರ 2015 ರಲ್ಲಿ ಪಂಜಾಬ್ ನಲ್ಲಿರುವ ಭಾರತ- ಪಾಕ್ ಗಡಿ ಪ್ರದೇಶದ ಯೋಧರೊಂದಿಗೆ ಆಚರಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video