ಜಮ್ಮು: ಜಮ್ಮು-ಕಾಶ್ಮೀರದ ರಾಜೌರಿ ವಲಯದಲ್ಲಿ ಸೋಮವಾರ ಭಾರತೀಯ ಸೇನಾಪಡೆ ಮೇಲೆ ಪಾಕಿಸ್ತಾನ ಸೇನೆ ನಡೆಸಿದ ದಾಳಿಯಲ್ಲಿ ಒಬ್ಬ ಸೈನಿಕ ಮೃತಪಟ್ಟಿದ್ದಾರೆ. ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸದೆ.
ಭಾರತ ಸರ್ಜಿಕಲ್ ಸ್ಟ್ರೈಕ್ ನಡೆಸಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉಗ್ರಗಾಮಿಗಳ ಅಡಗುದಾಣಗಳನ್ನು ನಾಶಪಡಿಸಿದ ನಂತರ ಪಾಕಿಸ್ತಾನ ಸೇನಾಪಡೆ 45ಕ್ಕೂ ಹೆಚ್ಚು ಬಾರಿ ಕದನ ವಿರಾಮ ಉಲ್ಲಂಘಿಸಿದೆ.ಇದುವರೆಗೆ 8 ಮಂದಿ ಭದ್ರತಾ ಸಿಬ್ಬಂದಿ ಹಾಗೂ ಮೂವರು ನಾಗರಿಕರು ಸೇರಿ 11 ಮಂದಿ ಮೃತಪಟ್ಟಿದ್ದಾರೆ.
ಪಾಕಿಸ್ತಾನ ಪಡೆ ಇಂದು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಕದನ ವಿರಾಮ ಉಲ್ಲಂಘಿಸಿದೆ.