ಸಂಗ್ರಹ ಚಿತ್ರ 
ದೇಶ

ಗಡಿಯಲ್ಲಿ ಮತ್ತೆ ಪಾಕ್ ಪುಂಡಾಟ: ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯುವತಿ ಸಾವು, 2 ಗಾಯ

ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮವನ್ನು ಉಲ್ಲಂಘಿಸಿದ್ದು, ಪಾಕಿಸ್ತಾನ ಸೈನಿಕರ ಅಪ್ರಚೋದಿತ ಗುಂಡಿನ ದಾಳಿಗೆ 19 ವರ್ಷದ ಯುವತಿ ಸಾವನ್ನಪ್ಪಿ, ಇಬ್ಬರು ನಾಗರಿಕರಿಗೆ ಗಾಯವಾಗಿರುವ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮವನ್ನು ಉಲ್ಲಂಘಿಸಿದ್ದು, ಪಾಕಿಸ್ತಾನ ಸೈನಿಕರ ಅಪ್ರಚೋದಿತ ಗುಂಡಿನ ದಾಳಿಗೆ 19 ವರ್ಷದ ಯುವತಿ ಸಾವನ್ನಪ್ಪಿ, ಇಬ್ಬರು ನಾಗರಿಕರಿಗೆ ಗಾಯವಾಗಿರುವ ಘಟನೆ ಮಂಗಳವಾರ ನಡೆದಿದೆ.

ಜಮ್ಮು ಮತ್ತು ಕಾಶ್ಮೀರದ ನೌಶೆರಾ, ಅರ್ನಿಯಾ ಮತ್ತು ರಾಮ್ಗರ್ಹ್ ಸೆಕ್ಟರ್ ಗಳಲ್ಲಿ ಪಾಕಿಸ್ತಾನ ಸೇನೆ ಕದನ ವಿರಾಮವನ್ನು ಉಲ್ಲಂಘಿಸಿದ್ದು, ಗಡಿಯಲ್ಲಿರುವ ನಾಗರೀಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ಹಾಗೂ ಶೆಲ್ ಗಳ ದಾಳಿಯನ್ನು ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಗುಂಡಿನ ದಾಳಿಗೆ ರಾಮ್ಗರ್ಹ್ ಸೆಕ್ಟರ್ ನ 19 ವರ್ಷದ ಯುವತಿಯೊಬ್ಬಳು ಮೃತಪಟ್ಟಿದ್ದಾಳೆಂದು ಹೇಳಲಾಗುತ್ತಿದೆ. ಇದರಂತೆ ಸಾಂಬಾ ಜಿಲ್ಲೆಯಲ್ಲಿಯೂ ಇಬ್ಬರು ನಾಗರೀಕರಿಗೆ ಗಾಯವಾಗಿರುವುದಾಗಿ ವರದಿಗಳು ತಿಳಿಸಿವೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪಾಕಿಸ್ತಾನ ಸೇನೆ ದಾಳಿಗೆ ಭಾರತೀಯ ಸೇನೆ ಕೂಡ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬಂಡೀಪುರದ ಅಜರ್ ಗ್ರಾಮದಲ್ಲಿ ಉಗ್ರರು ಅಡಗಿ ಕುಳಿತಿರುವುದಾಗಿ ತಿಳಿದುಬಂದಿದ್ದು, ಯೋಧರು ಕಾರ್ಯಾಚರಣೆ ನಡೆಸುತ್ತಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel