ಪಾಕ್ ಸೇನೆ ದಾಳಿಗೆ ಪ್ರತಿಕಾರ: 14 ಸೇನಾ ಔಟ್ ಪೋಸ್ಟ್ ಧ್ವಂಸಗೊಳಿಸಿದ ಭಾರತೀಯ ಸೇನೆ
ಪಾಕ್ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಗಡಿಯಲ್ಲಿ ನಿರಂತರವಾಗಿ ಗುಂಡಿನ ದಾಳಿ ನಡೆಸುತ್ತಿದ್ದು ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ ಸಹ ಪ್ರತಿ ದಾಳಿ...
ನವದೆಹಲಿ: ಪಾಕ್ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಗಡಿಯಲ್ಲಿ ನಿರಂತರವಾಗಿ ಗುಂಡಿನ ದಾಳಿ ನಡೆಸುತ್ತಿದ್ದು ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ ಸಹ ಪ್ರತಿ ದಾಳಿ ನಡೆಸಿದ್ದು ಪಾಕಿಸ್ತಾನದ 14 ಔಟ್ ಪೋಸ್ಟ್ ಗಳನ್ನು ಧ್ವಂಸ ಮಾಡಿದ್ದು, ಇಬ್ಬರು ಪಾಕ್ ಯೋಧರು ಹತ್ಯೆಯಾಗಿದ್ದಾರೆ ಎಂದು ವರದಿಯಾಗಿದೆ.
ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕ್ ಸೈನಿಕರ ಪುಂಡಾಟ ಹೆಚ್ಚಿದ್ದು, ಸಾಂಬಾ, ಪೂಂಚ್ ಜಿಲ್ಲೆ ಹಾಗೂ ಮಂಧಾರ್ ಪ್ರದೇಶದಲ್ಲಿ ಗುಂಡಿನ ದಾಳಿ ನಡೆಸಿದ್ದು ಇದರಲ್ಲಿ 8 ಭಾರತೀಯ ನಾಗರೀಕರು ಸಾವನ್ನಪ್ಪಿದ್ದಾರೆ. ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ ಪಾಕಿಸ್ತಾನದ 14 ಔಟ್ ಪೋಸ್ಟ ಧ್ವಂಸ ಮಾಡಿ ಪ್ರತಿಕಾರ ತೀರಿಸಿಕೊಂಡಿದೆ.
ಗಡಿಯಲ್ಲಿ ಪಾಕಿಸ್ತಾನ ಸೈನಿಕರು ನಿರಂತರವಾಗಿ ಗುಂಡಿನ ದಾಳಿ ನಡೆಸುತ್ತಿರುವುದರಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಪಾಕಿಸ್ತಾನ ಸೈನಿಕರ ಗುಂಡಿನ ದಾಳಿಯಲ್ಲಿ 8 ಮಂದಿ ಭಾರತೀಯರು ಮೃತಪಟ್ಟಿದ್ದು, 22 ಜನರಿಗೆ ಗಂಭೀರ ಗಾಯಗಳಾಗಿವೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.