'ಆವಾಜ್ ಏ ಪಂಜಾಬ್' ನೂತನ ಪಕ್ಷ ಸ್ಥಾಪಿಸಿದ ನವಜೋತ್ ಸಿಂಗ್ ಸಿಧು
ರಾಜ್ಯಸಭಾ ಸದಸ್ಯತ್ವ ಹಾಗೂ ಬಿಜೆಪಿಗೆ ರಾಜಿನಾಮೆ ನೀಡಿದ್ದ ಖ್ಯಾತ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ನೂತನ ಪಕ್ಷವನ್ನು ಸ್ಥಾಪಿಸಿದ್ದಾರೆ...
ಚಂಡೀಘಢ(ಪಂಜಾಬ್): ರಾಜ್ಯಸಭಾ ಸದಸ್ಯತ್ವ ಹಾಗೂ ಬಿಜೆಪಿಗೆ ರಾಜಿನಾಮೆ ನೀಡಿದ್ದ ಖ್ಯಾತ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ನೂತನ ಪಕ್ಷವನ್ನು ಸ್ಥಾಪಿಸಿದ್ದಾರೆ.
ರಾಜಿನಾಮೆ ನಂತರ ನವಜೋತ್ ಸಿಂಗ್ ಸಿಧು ಆಮ್ ಆದ್ಮಿ ಪಕ್ಷ ಸೇರುತ್ತಾರೆ ಎಂದು ಹೇಳಲಾಗಿತ್ತು. ಆದರೆ ಆಪ್ ನಡುವೆ ಒಮ್ಮತ ಮೂಡದಿದ್ದರಿಂದ ತಟಸ್ಥವಾಗಿ ಉಳಿದಿದ್ದ ಸಿಧು ಇದೀಗ ಆವಾಜ್ ಏ ಪಂಜಾಬ್ ಹೆಸರಿನ ನೂತನ ಪಕ್ಷವನ್ನು ಸ್ಥಾಪಿಸಿದ್ದಾರೆ.
ನವಜೋತ್ ಸಿಂಗ್ ಸಿಧು ನೂತನ ಪಕ್ಷ ಸ್ಥಾಪಿಸುತ್ತಾರೆ ಎಂದು ಸಿದ್ದು ಪತ್ನಿ ನವಜೋತ್ ಕೌರ್ ಮಾಹಿತಿ ನೀಡಿದ್ದರು.
ಪಂಜಾಬ್ ವಿಧಾನಸಭೆ ಚುನಾವಣೆ ಹಿನ್ನೆಲೆ ರಾಜಕೀಯ ಪಕ್ಷಗಳು ಗೆಲ್ಲಲು ರಣತಂತ್ರಗಳನ್ನು ರೂಪಿಸುತ್ತಿವೆ. ಇದೇ ವೇಳೆ ನವಜೋತ್ ಸಿಂಗ್ ಸಿಧು ಪಂಜಾಬ್ ನಲ್ಲಿ ನೂತನ ಪಕ್ಷವನ್ನು ಸ್ಥಾಪಿಸಿರುವುದು ಹಲವು ಕುತೂಹಲಗಳಿಗೆ ಎಡೆಮಾಡಿಕೊಟ್ಟಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.