ದೇಶ

ತೃಣಮೂಲ ಕಾಂಗ್ರೆಸ್ ಗೆ ರಾಷ್ಟ್ರೀಯ ಪಕ್ಷದ ಮಾನ್ಯತೆ ನೀಡಿದ ಚುನಾವಣಾ ಆಯೋಗ

Lingaraj Badiger
ನವದೆಹಲಿ: ಸಿಂಗೂರು ವಿಜಯದ ನಂತರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಗೆಲುವು ಸಿಕ್ಕಿದ್ದು, ಕೇಂದ್ರ ಚುನಾವಣಾ ಆಯೋಗ ಶುಕ್ರವಾರ ದೀದಿ ಅವರ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಗೆ ರಾಷ್ಟ್ರೀಯ ಪಕ್ಷದ ಮಾನ್ಯತೆ ನೀಡಿದೆ.
ತೃಣಮೂಲ ಕಾಂಗ್ರೆಸ್ ದೇಶದ ಏಳನೇ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಿದೆ ಎಂದು ಎಎನ್ಐ ವರದಿ ಮಾಡಿದೆ.
ಕೇಂದ್ರ ಚುನಾವಣಾ ಆಯೋಗದ ನಿಯಮದ ಪ್ರಕಾರ ಒಂದು ರಾಜಕೀಯ ಪಕ್ಷ ರಾಷ್ಟ್ರೀಯ ಮಾನ್ಯತೆ ಪಡೆಯಲು ಲೋಕಸಭೆ ಚುನಾವಣೆಯಲ್ಲಿ ಕನಿಷ್ಠ ಮೂರು ವಿಭಿನ್ನ ರಾಜ್ಯಗಳಿಂದ ಲೋಕಸಭೆಯ ಒಟ್ಟು ಬಲದ ಶೇ.2ರಷ್ಟು ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕು ಅಥವಾ ನಾಲ್ಕು ವಿಭಿನ್ನ ರಾಜ್ಯಗಳಿಂದ ಕನಿಷ್ಠ ಶೇ.6ರಷ್ಟು ಮತ ಪಡೆಯಬೇಕು ಅಥವಾ ನಾಲ್ಕಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ರಾಜ್ಯ ಪಕ್ಷದ ಸ್ಥಾನಮಾನ ಪಡೆದಿರಬೇಕು.
ತೃಣಮೂಲಕ ಕಾಂಗ್ರೆಸ್ ಪಶ್ಚಿಮ ಬಂಗಾಳ, ತ್ರಿಪುರ, ಅರುಣಾಚಲ ಪ್ರದೇಶ ಹಾಗೂ ಮಣಿಪುರದಲ್ಲಿ ರಾಜ್ಯ ಪಕ್ಷದ ಸ್ಥಾನಮಾನ ಹೊಂದಿದೆ. ಹೀಗಾಗಿ ರಾಷ್ಟ್ರೀಯ ಮಾನ್ಯತೆ ನೀಡಲಾಗಿದೆ.
SCROLL FOR NEXT