ಸೆಕ್ಸ್ ಸಿಡಿ ವಿವಾದ; ಸಂದೀಪ್ ಕುಮಾರ್ ಗೆ ಮಾದರಿಯಾಗುವಂತಹ ಶಿಕ್ಷೆಯಾಗಲಿ: ಕೇಜ್ರಿವಾಲ್
ಸೆಕ್ಸ್ ಸ್ಕ್ಯಾಂಡಲ್ ನಲ್ಲಿ ಸಿಕ್ಕಿಹಾಕಿಕೊಂಡು ಸಚಿವ ಸ್ಥಾನ ಕಳೆದುಕೊಂಡಿರುವ ಆಪ್ ಮಾಜಿ ಸಂದೀಪ್ ಕುಮಾರ್ ಗೆ ಇತರರಿಗೆ...
ನವದೆಹಲಿ: ಸೆಕ್ಸ್ ಸ್ಕ್ಯಾಂಡಲ್ ನಲ್ಲಿ ಸಿಕ್ಕಿಹಾಕಿಕೊಂಡು ಸಚಿವ ಸ್ಥಾನ ಕಳೆದುಕೊಂಡಿರುವ ಆಪ್ ಮಾಜಿ ಸಂದೀಪ್ ಕುಮಾರ್ ಗೆ ಇತರರಿಗೆ ಮಾದರಿಯಾಗುವಂತಹ ಶಿಕ್ಷೆಯಾಗಲಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಶಿಫಾರಸು ಮಾಡಿದ್ದಾರೆ.
ಸೆಕ್ಸ್ ಸಿಡಿಯಲ್ಲಿರುವ ಮಹಿಳೆ ಆಪ್ ಉಚ್ಚಾಟಿತ ಶಾಸಕ ಸಂದೀಪ್ ಕುಮಾರ್ ವಿರುದ್ಧ ದೂರು ದಾಖಲಿಸಿರುವ ಬಗ್ಗೆ ಟ್ವೀಟ್ ಮಾಡಿರುವ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಒಂದು ವೇಳೆ ಆ ಮಹಿಳೆಯ ಆರೋಪ ನಿಜವಾಗಿದ್ದರೆ, ಇದೊಂದು ಗಂಭೀರ ಪ್ರಕರಣ. ಹೀಗಾಗಿ ಸಂದೀಪ್ ಕುಮಾರ್ ಗೆ ಕಠಿಣ ಮತ್ತು ಇತರರಿಗೆ ಮಾದರಿಯಾಗುವಂತಹ ಶಿಕ್ಷೆ ನೀಡಲಿ ಎಂದಿದ್ದಾರೆ.
ಸೀಡಿಯಲ್ಲಿರುವ ಮಹಿಳೆ ಮಾಜಿ ಸಚಿವ ಸಂದೀಪ್ ಕುಮಾರ್ ವಿರುದ್ಧ ಸುಲ್ತಾನಪುರಿ ಪೊಲೀಸರಿಗೆ ದೂರು ನೀಡಿದ್ದು, ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಂದೀಪ್ ಕುಮಾರ್ ಅವರು ಇಂದು ಸಂಜೆ ಉಪ ಪೊಲೀಸ್ ಆಯುಕ್ತೆ ರೋಹಿಣಿ ಅವರ ಕಚೇರಿಯಲ್ಲಿ ಶರಣಾಗಿದ್ದಾರೆ. ಅಲ್ಲದೆ ದೂರು ನೀಡಿದ ಮಹಿಳೆಯನ್ನು ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.
ಕಳೆದ ಬುಧವಾರ ಸಂದೀಪ್ ಕುಮಾರ್ ಅವರು ಮಹಿಳೆಯರ ಜೊತೆ ಚೆಲ್ಲಾಟವಾಡುತ್ತಿರುವ ಸಿಡಿಯೊಂದು ಬಹಿರಂಗವಾಗುತ್ತಿದ್ದಂತೆ ಸಿಎಂ ಕೇಜ್ರಿವಾಲ್ ಅವರು ಸಂದೀಪ್ ಅವರನ್ನು ತಮ್ಮ ಸಂಪುಟದಿಂದ ವಜಾ ಮಾಡಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.