ಕಾಂಗ್ರೆಸ್ ನ್ನು ಟೀಕಿಸುವಾಗಲೂ ಮೋದಿಯನ್ನು ಬಿಡದ ಅರವಿಂದ್ ಕೇಜ್ರಿವಾಲ್
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕಾಂಗ್ರೆಸ್ ನ್ನು ಟೀಕಿಸುವಾಗಲೂ ಸಹ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಾರೆ.
ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕಾಂಗ್ರೆಸ್ ನ್ನು ಟೀಕಿಸುವಾಗಲೂ ಸಹ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಾರೆ.
ರಿಲಾಯನ್ಸ್ ಜಿಯೋ ಜಾಹಿರಾತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಪ್ರಕಟವಾಗಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಮೋದಿ ಅವರನ್ನು ಮಿ. ರಿಲಾಯನ್ಸ್ ಎಂದು ಟೀಕಿಸಿದ್ದ ಅರವಿಂದ್ ಕೇಜ್ರಿವಾಲ್, ಬೇರೆ ಯಾವ ಪ್ರಧಾನಿಗಳೂ ಮೋದಿಯಷ್ಟು ಕಾರ್ಪೊರೇಟ್ ಸಂಸ್ಥೆಗಳಿಗೆ ತಮ್ಮನ್ನು ತಾವು ಮಾರಾಟ ಮಾಡಿಕೊಂಡಿರಲಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ ನವರು ರಿಲಾಯನ್ಸ್ ಸಂಸ್ಥೆಗೆ ಗುಪ್ತವಾಗಿ ಸಹಾಯ ಮಾಡಿದ್ದರು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರಷ್ಟು ಬೇರೆ ಯಾವ ಪ್ರಧಾನಿಗಳು ಕಾರ್ಪೊರೇಟ್ ಸಂಸ್ಥೆಗಳಿಗೆ ಮಾರಾಟ ಮಾಡಿಕೊಡಿರಲಿಲ್ಲ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.