ಚೀನಾದೊಂದಿಗಿನ ದ್ವಿಪಕ್ಷೀಯ ಮಾತುಕತೆ ವೇಳೆ ಸಿಪಿಇಸಿ ಬಗ್ಗೆ ಆತಂಕ ವ್ಯಕ್ತಪಡಿಸಿದ ಪ್ರಧಾನಿ 
ದೇಶ

ಚೀನಾದೊಂದಿಗಿನ ದ್ವಿಪಕ್ಷೀಯ ಮಾತುಕತೆ ವೇಳೆ ಸಿಪಿಇಸಿ ಬಗ್ಗೆ ಆತಂಕ ವ್ಯಕ್ತಪಡಿಸಿದ ಪ್ರಧಾನಿ

ಜಿ-20 ಶೃಂಗಸಭೆಯಲ್ಲಿ ಭಾಗವಹಿಸಿರುವ ಪ್ರಧಾನಿ ನರೇಂದ್ರ ಮೋದಿ ಚೀನಾ ಅಧ್ಯಕ್ಷ ಕ್ಸಿ ಜಿಂಗ್ ಪಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಪಾಕಿಸ್ತಾನ- ಚೀನಾ ಎಕಾನಾಮಿಕ್ ಕಾರಿಡಾರ್ ಬಗ್ಗೆ...

ಬೀಜಿಂಗ್: ಜಿ-20 ಶೃಂಗಸಭೆಯಲ್ಲಿ ಭಾಗವಹಿಸಿರುವ ಪ್ರಧಾನಿ ನರೇಂದ್ರ ಮೋದಿ ಚೀನಾ ಅಧ್ಯಕ್ಷ ಕ್ಸಿ ಜಿಂಗ್ ಪಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಪಾಕಿಸ್ತಾನ- ಚೀನಾ ಎಕಾನಾಮಿಕ್ ಕಾರಿಡಾರ್ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. 
ಕಾರ್ಯತಂತ್ರಗಳ ಆಸಕ್ತಿಗಳ ಬಗ್ಗೆ ಎರಡೂ ದೇಶಗಳು ಸೂಕ್ಷ್ಮವಾಗಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಚೀನಾ ಅಧ್ಯಕ್ಷ ಕ್ಸಿ ಜಿಂಗ್ ಪಿಂಗ್ ಅವರಿಗೆ ಹೇಳಿದ್ದಾರೆ. ರಾಜಕೀಯ ಪರಿಸ್ಥಿತಿಗಳನ್ನು ಮಾತ್ರ ಆಧರಿಸಿ ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಮುಂದಾಗಬಾರದು, ದೀರ್ಘವಾಧಿಯ ದ್ವಿಪಕ್ಷೀಯ ಮಾತುಕತೆಗೆ ಉಭಯ ದೇಶಗಳು ಪರಸ್ಪರ ಆಕಾಂಕ್ಷೆಗಳನ್ನು, ಆತಂಕಗಳನ್ನು ಮತ್ತು ಕಾರ್ಯತಂತ್ರದ ಆಸಕ್ತಿಗಳನ್ನು ಗೌರವಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. 
ಉಭಯ ದೇಶಗಳು ಸಹ ಪರಸ್ಪರ ನಕಾರಾತ್ಮಕ ಗ್ರಹಿಕೆಯನ್ನು ತಡೆಯಬೇಕಾಗಿದೆ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ದ್ವಿಪಕ್ಷೀಯ ಮಾತುಕತೆ ಬಗ್ಗೆ ಮಾಹಿತಿ ನೀಡಿರುವ ವಿದೇಶಾಂಗ ಇಲಾಖೆಯ ವಕ್ತಾರ ವಿಕಾಸ್ ಸ್ವರೂಪ್, ಭಯೋತ್ಪಾದನೆ ನಡೆಯುತ್ತಿರುವ ಪ್ರದೇಶದಲ್ಲಿ ಚೀನಾ-ಪಾಕಿಸ್ತಾನ ಎಕಾನಾಮಿಕ್ ಕಾರಿಡಾರ್ ನಿರ್ಮಾಣವಾಗುತ್ತಿರುವುದರ ಬಗ್ಗೆ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ