ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ನಿಗಮ -ಮಂಡಳಿ ಅಧ್ಯಕ್ಷರ ಪಟ್ಟಿ ತಿರಸ್ಕರಿಸಿದ ರಾಹುಲ್ ಗಾಂಧಿ

ನಿಗಮ, ಮಂಡಳಿಗಳ ಅಧ್ಯಕ್ಷರ ನೇಮಕಾತಿಯಲ್ಲಿ ಯುವಕರಿಗೆ ಪ್ರಾತಿನಿಧ್ಯತೆ ನೀಡಬೇಕು ಎಂದು ಹೇಳಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ನಿರ್ದಿಷ್ಟ ಮಾನದಂಡ ...

ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ
Shilpa D
Updated On : 4 Sept 2016, 9:43 am

ನವದೆಹಲಿ: ನಿಗಮ, ಮಂಡಳಿಗಳ ಅಧ್ಯಕ್ಷರ ನೇಮಕಾತಿಯಲ್ಲಿ ಯುವಕರಿಗೆ ಪ್ರಾತಿನಿಧ್ಯತೆ ನೀಡಬೇಕು ಎಂದು ಹೇಳಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ನಿರ್ದಿಷ್ಟ ಮಾನದಂಡ ಅನುಸರಿಸಲು ಸಿಎಂ ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್‌ ಅವರು ನಿಗಮ, ಮಂಡಳಿ ನೇಮಕದ ಸಂಭವನೀಯ ಪಟ್ಟಿಯೊಂದಿಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಹಾಗೂ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ದಿಗ್ವಿಜಯ್‌ ಸಿಂಗ್‌ ಅವರನ್ನು ಭೇಟಿ ಮಾಡಿ ಚರ್ಚಿಸಿದರಾದರೂ, ಒಪ್ಪಿಗೆ ದೊರೆಯದೇ ಮರಳಿದರು. ಹೀಗಾಗಿ ನೇಮಕ ಪ್ರಕ್ರಿಯೆ ಮತ್ತೆ ಮುಂದಕ್ಕೆ ಹೋಗಿದೆ.

ಸಚಿವ ಸ್ಥಾನ ದೊರೆಯದೆ ನಿರಾಸೆಗೆ ಒಳಗಾಗಿರುವ 25ಕ್ಕೂ ಅಧಿಕ ಶಾಸಕರನ್ನೂ, ಸಿದ್ದರಾಮಯ್ಯ ಅವರೊಂದಿಗೆ ಪಕ್ಷ ಸೇರಿರುವ 25ಕ್ಕೂ ಅಧಿಕ ಮುಖಂಡರನ್ನೂ ಪಟ್ಟಿಯಲ್ಲಿ ಸೇರ್ಪಡೆ ಮಾಡಿದ್ದರಿಂದಲೇ ಹೈಕಮಾಂಡ್‌ ಒಪ್ಪಿಗೆ ನೀಡಿಲ್ಲ ಎಂದು ಪಕ್ಷದ ಮೂಲಗಳು ಖಚಿತಪಡಿಸಿವೆ. ಸೆಪ್ಟಂಬರ್ 24 ರ ನಂತರ ಮತ್ತೊಂದು ಪಟ್ಟಿ ಸಿದ್ಧ ಮಾಡಿಕೊಂಡು ಸಿಎಂ ಸಿದ್ದರಾಮಯ್ಯ  ಹೈಕಮಾಂಡ್ ಬಳಿ ತೆರಳಲಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement