ವಿಶ್ವ ಹಿಂದು ಪರಿಷತ್‌ನ ಅಧ್ಯಕ್ಷ ಪ್ರವೀಣ್‌ ತೊಗಾಡಿಯಾ 
ದೇಶ

ನಿತೀಶ್'ಗೆ ಸೆಲ್ಯೂಟ್ ಹೊಡೆದ ತೊಗಾಡಿಯಾ: ಎಲ್ಲಾ ರಾಜ್ಯಗಳಲ್ಲೂ ಮದ್ಯ ನಿಷೇಧಿಸುವಂತೆ ಆಗ್ರಹ

ಬಿಹಾರ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಸಂಪೂರ್ಣವಾಗಿ ನಿಷೇಧ ಹೇರುವ ಮೂಲಕ ಮಹತ್ತರ ನಿರ್ಧಾರ ಕೈಗೊಂಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ವಿಶ್ವ ಹಿಂದು ಪರಿಷತ್‌ನ...

ನವದೆಹಲಿ: ಬಿಹಾರ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಸಂಪೂರ್ಣವಾಗಿ ನಿಷೇಧ ಹೇರುವ ಮೂಲಕ ಮಹತ್ತರ ನಿರ್ಧಾರ ಕೈಗೊಂಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ವಿಶ್ವ ಹಿಂದು ಪರಿಷತ್‌ನ ಅಧ್ಯಕ್ಷ ಪ್ರವೀಣ್‌ ತೊಗಾಡಿಯಾ ಅವರು ಹಾಡಿ ಹೊಗಳಿದ್ದಾರೆ.

ಮದ್ಯ ಚಟದ ವಿರುದ್ಧ ಪ್ರಚಾರ 'ಇಂಡಿಯಾ ಹೆಲ್ತ್ ಲೈನ್' ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಬಿಹಾರ ರಾಜ್ಯದಲ್ಲಿ ಮದ್ಯವನ್ನು ಸಂಪೂರ್ಣವಾಗಿ ನಿಷೇಧ ಮಾಡಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಸೆಲ್ಯೂಟ್ ಹೊಡೆಯಲು ಇಚ್ಛಿಸುತ್ತೇನೆ ಎಂದು ಹೇಳಿದ್ದಾರೆ.

ನಿತೀಶ್ ಅವರ ಈ ನಿರ್ಧಾರ ಸಾಕಷ್ಟು ಕುಟುಂಬಗಳನ್ನು ರಕ್ಷಣೆ ಮಾಡಿದೆ. ಕೇವಲ ಮದ್ಯ ಸೇವನೆಗೆ ಜನರು ಸಾವಿರಾರು ಕೋಟಿ ರುಪಾಯಿ ಹಣವನ್ನು ಖರ್ಚು ಮಾಡುತ್ತಿದ್ದರು. ಇದೀಗ ಆ ಹಣವನ್ನು ಇನ್ನಿತರೆ ಒಳ್ಳೆಯ ಕೆಲಸಕ್ಕೆ ವಿನಿಯೋಗಿಸಲು ಸಹಾಯಕವಾಗಲಿದೆ. ಇದೇ ರೀತಿ ಇತರೆ ರಾಜ್ಯಗಳೂ ಕೂಡ ಮದ್ಯಕ್ಕೆ ಸಂಪೂರ್ಣ ನಿಷೇಧ ಹೇರಬೇಕು.

ಮದ್ಯಚಟದ ವಿರುದ್ಧ ನಡೆಸಲಾಗುತ್ತಿರುವ ಪ್ರಚಾರಕ್ಕೆ ಸಾಕಷ್ಟು ರಾಜ್ಯಗಳಿಂದ ಉತ್ತಮ ಪ್ರತಿಕ್ರಿಯೆಗಳು ಬರುತ್ತಿದೆ. ಒಂದು ದಿನ ದೇಶ ಕೂಡ ಮದ್ಯ ಮುಕ್ತ ರಾಷ್ಟ್ರವಾಗಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ