ವಿಕಾಸ್ ಸ್ವರೂಪ್ 
ದೇಶ

ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಬಗ್ಗೆ ನಿರ್ಧಾರ ಕೈಗೊಂಡಿಲ್ಲ: ಭಾರತ

ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನದಲ್ಲಿ ನಡೆಯಲಿರುವ ಸಾರ್ಕ್ ಸಮ್ಮೇಳನದಲ್ಲಿ ಭಾಗವಹಿಸುವ ಬಗ್ಗೆ ಈ ವರೆಗೂ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಭಾರತ ಸರ್ಕಾರ ಸ್ಪಷ್ಟಪಡಿಸಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನದಲ್ಲಿ ನಡೆಯಲಿರುವ ಸಾರ್ಕ್ ಸಮ್ಮೇಳನದಲ್ಲಿ ಭಾಗವಹಿಸುವ ಬಗ್ಗೆ ಈ ವರೆಗೂ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಭಾರತ ಸರ್ಕಾರ ಸ್ಪಷ್ಟಪಡಿಸಿದೆ.

ಮೋದಿ ಪಾಕಿಸ್ತಾನದ ಭೇಟಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಇಲಾಖೆ ವಕ್ತಾರ ವಿಕಾಸ್ ಸ್ವರೂಪ್, ಇಂತಹ ವಿಷಯಗಳ ಬಗ್ಗೆ ಇಷ್ಟೊಂದು ಮುಂಚೂತವಾಗಿ ತೀರ್ಮಾನವನ್ನು ಕೈಗೊಳ್ಳಲಾಗುವುದಿಲ್ಲ ಎಂದು ಹೇಳಿದ್ದಾರೆ. ಸಾರ್ಕ್ ಸಮ್ಮೇಳನದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನ ಭೇಟಿಯನ್ನು ಎದುರುನೋಡುತ್ತಿದ್ದಾರೆ ಎಂದು ಪಾಕಿಸ್ತಾನದಲ್ಲಿರುವ ಭಾರತದ ಹೈಕಮಿಷನರ್ ಗೌತಮ್ ಬಾಂಬಾವಲೆ ಹೇಳಿದ್ದರು.

ಗೌತಮ್ ಬಾಂಬಾವಲೆ ಹೇಳಿಕೆ ಬೆನ್ನಲ್ಲೇ ವಿಕಾಸ್ ಸ್ವರೂಪ್ ಪ್ರಧಾನಿ ಮೋದಿ ಅವರ ಪಾಕಿಸ್ತಾನ ಭೇಟಿ ಬಗ್ಗೆ ಇನ್ನೂ ಯಾವ ನಿರ್ಧಾರವನ್ನೂ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT